Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮಾದರಿ ನೀತಿ ಸಂಹಿತೆ ಪೂರ್ವದಲ್ಲಿಯೇ ಸಂಪೂರ್ಣ ಪ್ರಗತಿ ಸಾಧಿಸಿ : ಅನುದಾನ ಬಳಕೆಗೆ ಕ್ರಿಯಾ ಯೋಜನೆ ಸಿದ್ದಪಡಿಸಿ : ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ  

06:34 PM Dec 28, 2023 IST | suddionenews
Advertisement

ಚಿತ್ರದುರ್ಗ. ಡಿ.28 :  ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಪೂರ್ವದಲ್ಲಿಯೇ ಎಲ್ಲಾ ಇಲಾಖೆಗಳ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನಗಳ ಬಳಕೆ ಮಾಡಿ ಸಂಪೂರ್ಣ ಪ್ರಗತಿ ಸಾಧಿಸಬೇಕು.  ಬಿಡುಗಡೆಯಾಗಿರುವ ಅನುದಾನದ ಬಳಕೆಗೆ 15 ದಿನದ ಒಳಗಾಗಿ ಕ್ರಿಯಾ ಯೋಜನೆ ಸಿದ್ದಪಡಿಸಿ ಅನುಮತಿ ಪಡೆಯುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಗುರುವಾರ ಜರುಗಿದ 2023-24ನೇ ಸಾಲಿನ ನವೆಂಬರ್-2023 ಮಾಹೆಯ ಅಂತ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಉಪಯೋಜನೆ (ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ) ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಅವರು ಮಾತನಾಡಿದರು.
ಎಲ್ಲಾ ಇಲಾಖೆಗಳು ಫೆಬ್ರವರಿ ಅಂತ್ಯದ ವೇಳೆ ಶೇ.100 ರಷ್ಟು ಆರ್ಥಿಕ ಪ್ರಗತಿ ಸಾಧಿಸಬೇಕು. ಲೋಕಸಭಾ, ವಿಧಾನ ಪರಿಷತ್ ಹಾಗೂ ಪಂಚಾಯತಿ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಹೊಸ ಯೋಜನೆಗಳಿಗೆ ಅನುಮೋದನೆ ನೀಡುವುದು ಸಾಧ್ಯವಾಗುವುದಿಲ್ಲ.  ಹೀಗಾಗಿ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಪೂರ್ವದಲ್ಲಿಯೇ ಎಲ್ಲಾ ಇಲಾಖೆಗಳ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನಗಳ ಬಳಕೆ ಮಾಡಿ ಸಂಪೂರ್ಣ ಪ್ರಗತಿ ಸಾಧಿಸಬೇಕು ಎಂದರು.

ವಿದ್ಯಾರ್ಥಿ ನಿಲಯಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅನುದಾನ ಬಳಕೆ ಮಾಡಿ : ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳ ಕುಡಿಯುವ ನೀರು, ಸೋಲಾರ್ ವಾಟರ್ ಹೀಟರ್ ಸೇರಿದಂತೆ ಇತರೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಅಳವಡಿಕೆಗೆ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನ ಬಳಕೆಗೆ ಆದ್ಯತೆ ನೀಡಬೇಕು. ಎಲ್ಲಾ ನಗರ, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿಗಳಿಂದ ವಿದ್ಯಾರ್ಥಿಗಳ ನಿಲಯಗಳಿಗೆ ನೀರಿನ ಸಂಪರ್ಕ ಒದಗಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೇಳಿದರು.

Advertisement

ತಿಂಗಳ ಅಂತ್ಯದ ವೇಳೆಗೆ ವಸತಿ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪಟ್ಟಿಯನ್ನು ಕಳುಹಿಸಿಕೊಡಬೇಕು. ವಿವಿಧ ನಿಗಮಗಳಡಿ ನೀಡಲಾಗುವ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಶಾಸಕರ ನೇತೃತ್ವದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಎಲ್ಲಾ ಇಲಾಖೆ ಹಾಗೂ ನಿಗಮಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಎಲ್ಲಾ ಇಲಾಖೆ ಹಾಗೂ ಅಭಿವೃದ್ಧಿ ನಿಗಮಗಳಿಂದ ಎಸ್.ಸಿ.ಪಿ ಯೋಜನೆಯಡಿ ರೂ. 144.15 ಕೋಟಿ ಹಾಗೂ ಟಿಎಸ್‍ಪಿ ಯೋಜನೆಯಡಿ ರೂ.102.78 ಕೋಟಿ ಅನುದಾನ ಖರ್ಚು ಮಾಡಿ ಒಟ್ಟು ಶೇ.92 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸಭೆಯಲ್ಲಿ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಒಟ್ಟು 37 ಅನುಷ್ಠಾನ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಜಿಲ್ಲಾಧಿಕಾರಿಗಳ ನಡೆಸಿದರು.
ಸಭೆಯಲ್ಲಿ ಜಿ.ಪಂ.ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪರಮೇಶ್ವರಪ್ಪ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Tags :
chitradurgaDistrict Collector Divyaprabhu G.R.Jsuddioneಚಿತ್ರದುರ್ಗಸುದ್ದಿಒನ್
Advertisement
Next Article