For the best experience, open
https://m.suddione.com
on your mobile browser.
Advertisement

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

05:46 PM Apr 20, 2024 IST | suddionenews
ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ
Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Advertisement
Advertisement

ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ, ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಚಂದ್ರಣ್ಣ, ವರವು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಡಾ.ಕಾಟಲಿಂಗಯ್ಯ, ಗ್ರಾಮ ಪಂಚಾಯಿತಿ ಸದಸ್ಯೆ ಶಿವರುದ್ರಮ್ಮ, ಯುವ ಮುಖಂಡ ಬೊಮ್ಮಯ್ಯ, ಕೆ.ನಾಗರಾಜು, ರಾಜಣ್ಣ, ತಿಪ್ಪೇಸ್ವಾಮಿ, ಎನ್.ಹೆಚ್.ನಾಗರಾಜು, ಕೆ.ತಿಪ್ಪೇಸ್ವಾಮಿ, ಸುರೇಶ್, ರಾಮುಯಾದವ್, ಎತ್ತಿನಕಾಟಪ್ಪ, ಕಾಮರಾಜು, ನಾಗಭೂಷಣ, ವಿಜಯ ಇನ್ನು ಅನೇಕರು ಜಿಲ್ಲಾ  ಕಾಂಗ್ರೆಸ್ ಕಚೇರಿಯಲ್ಲಿ ಸೇರ್ಪಡೆಗೊಂಡರು.

Advertisement

ಬಿಜೆಪಿಯವರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಕೋಮುವಾದಿ ಬಿಜೆಪಿ.ಯಿಂದ ಬೇಸತ್ತು ನಮ್ಮ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿರುವುದರ ಜೊತೆಗೆ ಈ ಬಾರಿಯ ಚುನಾವಣೆಯಲ್ಲಿ ನಿಮ್ಮ ನಿಮ್ಮ ಬೂತ್‍ಗಳಲ್ಲಿ ಸಂಚರಿಸಿ ಪಕ್ಷಕ್ಕೆ ಹೆಚ್ಚಿನ ಮತವನ್ನು ಹಾಕಿಸುವ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದರು.

Advertisement
Advertisement

ದ್ರಾಕ್ಷಾ ಮತ್ತು ವೈನ್ ಮಂಡಳಿ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಸದಸ್ಯ ಬಿ.ಯೋಗೇಶ್‍ಬಾಬು ಮಾತನಾಡುತ್ತ ಬಿಜೆಪಿ.ಯ ಇಪ್ಪತ್ತೈದಕ್ಕು ಹೆಚ್ಚು ಮಂದಿ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕಾಂಗ್ರೆಸ್‍ಗೆ ಬಲ ಬಂದಂತಾಗಿದೆ. ಕಾಂಗ್ರೆಸ್‍ನ ತತ್ವ ಸಿದ್ದಾಂತಗಳಿಗೆ ಮನಸೋತು ಪಕ್ಷ ಸೇರ್ಪಡೆಗೊಂಡವರು ಕ್ಷೇತ್ರಾದ್ಯಂತ ಸುತ್ತಾಡಿ ಪಕ್ಷದ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸುವ ಮೂಲಕ ಮತಗಳಾಗಿ ಪರಿವರ್ತಿಸಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಪಣತೊಡಬೇಕೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಸಂಪತ್‍ಕುಮಾರ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್, ಜಿಲ್ಲಾ ಕಾರ್ಯದರ್ಶಿ ಪಿ.ಎನ್.ಶ್ರೀನಿವಾಸುಲು, ಯುವ ಕಾಂಗ್ರೆಸ್ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರೀಶ್, ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಎನ್.ಶಶಾಂಕ್ ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
Advertisement