ರಾಷ್ಟ್ರೀಯ ಶಿಕ್ಷಣ ನೀತಿ-2020 : ರಾಜ್ಯ ಸರ್ಕಾರದ ನಿಲುವಿಗೆ ಎಬಿವಿಪಿ ಖಂಡನೆ
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಚಿತ್ರದುರ್ಗ ಮೇ. 13 : ಭಾರತ ದೇಶದಲ್ಲಿ ಭಾರತೀಯ ಶಿಕ್ಷಣ ನೀತಿಜಾರಿಗೆ ಬರಬೇಕು ಅದು ಮುಂದಿನ ಹತ್ತಾರು ವಷಗಳ ನಂತರ ದೇಶದಲ್ಲಿ ಕೌಶಲ್ಯಯುತ ಯುವಶಕ್ತಿ ಹೊರಗಡೆ ಬರಬೇಕು, ಬ್ರಿಟಿಷ್ ಶಿಕ್ಷಣ ನೀತಿಯಿಂದ ಮುಕ್ತರಾಗಿ ಭಾರತೀಯ ಶಿಕ್ಷಣವನ್ನ ಪಡೆಯಬೇಕು ಎಂಬ ಉದ್ದೇಶದಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನ್ನು ಭಾರತ ಸರ್ಕಾರ ಜಾರಿಗೆ ತಂದಿದ್ದು ಅದನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ರಾಜ್ಯ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.
ಆದರೆ ಇಂದಿನ ರಾಜ್ಯ ಸರ್ಕಾರ ತನ್ನಚುನಾವಣಾ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಹಿಂಪಡೆಯುತ್ತೇವೆ ಎಂದು ಹೇಳಿದ ಕಾರಣಕ್ಕೋಸ್ಕರ ಒಂದು ಶಿಕ್ಷಣ ನೀತಿಯನ್ನ ಬದಲಾವಣೆ ಮಾಡಲು ಹೊರಟಿರುವ ಸರ್ಕಾರದ ನಡೆಯನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ.
ಜಿಲ್ಲಾಧಿಕಾರಿಗಳು ಮುಖಾಂತರ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಎಬಿವಿಪಿ ಪದಾಧಿಕಾರಿಗಳು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಒಂದೇ ರೀತಿಯ ಶಿಕ್ಷಣ ಪದ್ಧತಿ ಇರಬೇಕು ಆ ಶಿಕ್ಷಣ ಪದ್ಧತಿ, ಭಾರತೀಯ ವಿದ್ಯಾರ್ಥಿಗಳಿಗೆ ಯೋಗ ಹಾಗೂ ಇನ್ನಿತರ ಕೌಶಲ್ಯವನ್ನು ನೀಡುವ ಉದ್ದೇಶ ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶವಾಗಿದೆ, ಮುಂದಿನ 20-25 ವಷಗಳಲ್ಲಿ ಆಗಬಹುದಾದ ಬದಲಾವಣೆಯನ್ನು ಮುಂದಿಟ್ಟುಕೊಂಡು ಈ ನೀತಿಯನ್ನ ಹಲವಾರು ಶಿಕ್ಷಣ ತಜ್ಞರು ತಯಾರಿ ಮಾಡಿದ್ದಾರೆ, ಆದರೆರಾಜ್ಯ ಸರ್ಕಾರ ರಾಷ್ಟ್ರೀಯತೆಯನ್ನ ತುಂಡು ಮಾಡಿ ಪ್ರತ್ಯೇಕತೆಯ ಹೆಜ್ಜೆಯನ್ನ ಇಡುತ್ತಿರುವುದು ಕರ್ನಾಟಕವನ್ನು ಹಿಮ್ಮುಖ ಚಲನೆಗೆ ತೆಗೆದುಕೊಂಡು ಹೋದಂತಾಗುತ್ತದೆ, ಭಾರತೀಯತೆಯ ವಿರೋಧಿ ನೀತಿಯನ್ನು, ಭಾರತೀಯ ಜೀವನ ಪದ್ಧತಿಯನ್ನು ವಿರೋಧಿಸುವ ನೀತಿಯನ್ನು, ಇಂಗ್ಲಿಷ್ ಶಿಕ್ಷಣ ಪದ್ಧತಿಯ ನಿಲುವನ್ನ ಒಪ್ಪಿಕೊಳ್ಳುವ ನೀತಿಯನ್ನು, ಲಿಬರಲ್ ಎಜುಕೇಶನ್ ನಿಂದ ಹಿನ್ನಡೆಗೆ ತೆಗೆದುಕೊಂಡು ಹೋಗುವ ನೀತಿಯನ್ನು, ಯುಜಿಸಿ ನಿಯಮಾವಳಿಗಳನ್ನು ಕಡೆಗಣಿಸುವ ನೀತಿಯನ್ನ, ಈ ರಾಜ್ಯ ಸರ್ಕಾರ ತೆಗೆದುಕೊಳ್ಳುವುದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತಿದೆ, ಯು.ಪಿ.ಎಸ್.ಸಿ ಹಾಗು ಇನ್ನಿತರ ಸ್ಪರ್ಧಾತ್ಮಕ ಕೋರ್ಸ್‌ಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯದ ಶಿಕ್ಷಣ ಪದ್ಧತಿಯನ್ನು ಬದಲಾವಣೆ ಮಾಡುವುದರಿಂದ ಅನ್ಯಾಯ ಮಾಡಿದಂತಾಗುತ್ತದೆ.
ಕೇವಲ ರಾಜಕೀಯ ಕಾರಣಕ್ಕೋಸ್ಕರ ಒಂದು ಉತ್ತಮ ಪ್ರಯೋಗಶೀಲ ಶಿಕ್ಷಣ ಪದ್ಧತಿಯನ್ನು ಬದಲಾವಣೆ ಮಾಡಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡಲು ಹೊರಟಿರುವ ಸರ್ಕಾರದ ನಡೆ ನಿಜಕ್ಕೂ ಮುಂದಿನ ದಿನಗಳಲ್ಲಿ ಬಹು ದೊಡ್ಡ ಮಾರಕವಾಗಲಿದೆ, ಎನ್‌ಇಪಿ ಜಾರಿ ಮಾಡಿದ ಕಾರಣಕ್ಕೋಸ್ಕರ ನೂರಾರು ಕೋಟಿ ರೂಪಾಯಿ ಅನುದಾನವನ್ನು ಪಿಎಂ ಉಷಾಯೋಜನೆಯಡಿಯಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ ನೀಡಿದೆ, ಒಂದು ವೇಳೆ ಎನ್.ಇ.ಪಿಯನ್ನು ರದ್ದು ಪಡಿಸಿದ್ದೆ ಆದಲ್ಲಿ ವಿಶ್ವವಿದ್ಯಾಲಯದ ನೀಡಿದ ಅನುದಾನವನ್ನು ಕರ್ನಾಟಕ ರಾಜ್ಯ ಸರ್ಕಾರ ಕಳೆದುಕೊಳ್ಳಬೇಕಾಗುತ್ತದೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಉನ್ನತ ಶಿಕ್ಷಣ ಸಚಿವರು ಈ ಎಲ್ಲ ವಿಷಯವನ್ನು ಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಧ್ಯಂತರ ವರದಿಯ ಪ್ರಕಾರ ಹಿಂದಿನ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರುತ್ತೇವೆ ಎಂಬ ಆದೇಶವನ್ನು ನೀಡಿರುವುದು ಎಬಿವಿಪಿ ಖಂಡಿಸುತ್ತದೆ ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದು ಎನ್.ಇ.ಪಿಯಲ್ಲಿ ಆಗಿರುವ ಲೋಪದೋಷಗಳನ್ನ ಸರಿಮಾಡಿ ರಾಜ್ಯದಲ್ಲಿ ಸಮರ್ಪಕವಾದ ಎನ್.ಇ.ಪಿ ಮಾಡಿ ಈ ದೇಶದ ಶಿಕ್ಷಣ ಪದ್ಧತಿಯೊಂದಿಗೆ ಕರ್ನಾಟಕ ರಾಜ್ಯವಾನ್ನಗಿ ತೆಗೆದುಕೊಂಡು ಹೋಗುವ ಮಹತ್ತರ ಜವಾಬ್ದಾರಿಯನ್ನು ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ಒಂದು ವೇಳೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನೂ ರದ್ದು ಪಡಿಸಿದ್ದೆ ಆದಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಈ ಮೂಲಕ ರಾಜ್ಯ ಸರ್ಕಾರಕ್ಕೆ ನೀಡುತ್ತೇವೆ.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ಕನಕರಾಜ್ ಕೋಡಿಹಳ್ಳಿ, ನಗರ ಕಾರ್ಯದರ್ಶಿ ಗೋಪಿ, ವಿದ್ಯಾರ್ಥಿ ಪ್ರಮುಖ್ ಚಂದನ, ಚಿತ್ರಸ್ವಾಮಿ, ದರ್ಶನ್, ಮಧು, ಮನೋಜ್, ಕಾರ್ಯಕರ್ತರು ಯುವರಾಜ್ ಇನ್ನು ಇತರರು ಉಪಸ್ಥಿತರಿದ್ದರು.