For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ

10:20 PM Dec 24, 2023 IST | suddionenews
ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರೀಯ ರೈತ ದಿನಾಚರಣೆ
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

Advertisement
Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.24 : ದೇಶಕ್ಕೆ ಅನ್ನ ಕೊಡುತ್ತಿರುವ ರೈತರ ಋಣ ತೀರಿಸಬೇಕಾಗಿರುವುದರಿಂದ ಮುಂದಿನ ಪಾರ್ಲಿಮೆಂಟ್ ಚುನಾವಣೆಯಲ್ಲಿ ರೈತ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಕಾರ್ಯಕರ್ತರಿಗೆ ಕರೆ ನೀಡಿದರು.

Advertisement

ಚೌಧರಿ ಚರಣ್‍ಸಿಂಗ್ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಿಸಾನ್ ಸೆಲ್‍ನಿಂದ ಭಾನುವಾರ ನಡೆದ ರಾಷ್ಟ್ರೀಯ ರೈತ ದಿನಾಚರಣೆ ಉದ್ಗಾಟಿಸಿ ಮಾತನಾಡಿದರು.

Advertisement

ತಂತ್ರಜ್ಞಾನ ಬೆಳೆದಿದೆ. ಆಧುನಿಕ ಪದ್ದತಿ ಮೂಲಕ ರೈತರು ಬೆಳೆ ವಿಮೆ ಪಾವತಿಸಿ ಬೆಳೆ ನಷ್ಟಕ್ಕೊಳಗಾದ ಸಂದರ್ಭದಲ್ಲಿ ಸರ್ಕಾರದಿಂದ ಪರಿಹಾರ ಪಡೆದುಕೊಳ್ಳಬಹುದು. ರೈತರ ಬದುಕಿಗೆ ಭದ್ರತೆ ಕೊಡುವುದು ಕಾಂಗ್ರೆಸ್ ಪಕ್ಷವೆ ವಿನಃ ಕೋಮುವಾದಿ ಬಿಜೆಪಿ.ಯಲ್ಲ ಎನ್ನುವುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ರೈತರು, ಕೃಷಿಕರು, ಕಾರ್ಮಿಕರು ಬಡವರ ಪರವಾಗಿ ಕಾಂಗ್ರೆಸ್ ಇದೆ. ಬಿಜೆಪಿ. ಶ್ರೀಮಂತರ ಪಕ್ಷ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಸಾಲ ಮನ್ನ ಮಾಡಿದ ಕೀರ್ತಿ ನಮ್ಮ ಪಕ್ಷಕ್ಕೆ ಸಲ್ಲುತ್ತದೆ. ಡಾ.ಮನಮೋಹನ್‍ಸಿಂಗ್ ದೇಶದ ಪ್ರಧಾನಿಯಾಗಿದ್ದಾಗ ರೈತರ 73 ಸಾವಿರ ಕೋಟಿ ರೂ.ಗಳ ಸಾಲ ಮನ್ನ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿರುವ ಐದು ಉಚಿತ ಗ್ಯಾರೆಂಟಿಗಳಿಂದಲೂ ರೈತರಿಗೆ ಅನುಕೂಲವಾಗಿದೆ ಎಂದು ಹೇಳಿದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ ಯಾವುದೇ ಸಭೆ ಸಮಾರಂಭ, ಸಮಾವೇಶಗಳಲ್ಲಿ ರೈತ ಗೀತೆಯನ್ನು ಹಾಡುವ ಪದ್ದತಿಯನ್ನು ಜಾರಿಗೆ ತಂದಿದ್ದು, ಕಾಂಗ್ರೆಸ್ ಪಕ್ಷ. ಅಧಿಕಾರಿಗಳು, ಸರ್ಕಾರಿ ನೌಕರರು ಮೃತಪಟ್ಟರೆ ಕುಟುಂಬಕ್ಕೆ ಅನುಕಂಪದ ನೌಕರಿ, ಪಿಂಚಣಿ ಸಿಗುತ್ತದೆ. ರೈತ ಸತ್ತರೆ ಯಾವ ಪರಿಹಾರವೂ ಇಲ್ಲ. ಕೇಂದ್ರ ಸರ್ಕಾರದ ಮೂರು ಕರಾಳ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಲಕ್ಷಾಂತರ ರೈತರು ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ ಎಂಟು ನೂರು ರೈತರು ಸಾವನ್ನಾಪ್ಪಿದಾಗ ಮಾನವೀಯತೆಯಿಂದಾದರೂ ದೇಶದ ಪ್ರಧಾನಿ ಮೋದಿ ರೈತರ ಬಳಿ ಧಾವಿಸಿ ಸಮಸ್ಯೆಗಳನ್ನು ಕೇಳಬಹುದಿತ್ತು. ಅದ್ಯಾವುದು ಮಾಡಲಿಲ್ಲ. ರೈತರು ಎಚ್ಚೆತ್ತುಕೊಂಡು ಪಾರ್ಲಿಮೆಂಟ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.

ಅಭ್ಯರ್ಥಿ ಯಾರೆ ಆಗಲಿ. ಹೊರಗಿನವರು, ಒಳಗಿನವರು ಎನ್ನುವ ವ್ಯತ್ಯಾಸ ಬೇಡ. ಪಕ್ಷದ ಚಿನ್ಹೆ ಹಾಗೂ ದೇಶದ ಭದ್ರತೆ ದೃಷ್ಠಿಯಿಂದ ಕಾಂಗ್ರೆಸ್‍ಗೆ ಮತ ನೀಡಿ ಚಿತ್ರದುರ್ಗದಿಂದ ಲೋಕಸಭೆಗೆ ಹೋಗಲೇಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಕಿಸಾನ್‍ಸೆಲ್ ವಿಭಾಗದ ಉಪಾಧ್ಯಕ್ಷ ಶಿವಲಿಂಗಪ್ಪ ಮಾತನಾಡಿ ಗೊಬ್ಬರ ಔಷಧಿಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಿರುವ ಕೇಂದ್ರ ಸರ್ಕಾರ ಸಂಪೂರ್ಣ ರೈತ ವಿರೋಧಿಯಾಗಿದೆ. ಬಡವರು, ಕೂಲಿ ಕಾರ್ಮಿಕರು, ಕೃಷಿಕರು, ರೈತರು ಬದುಕುವಂತಿಲ್ಲ. ಮೋಸ ನಡೆಯುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಕೋಮುವಾದಿಯನ್ನು ಅಧಿಕಾರದಿಂದ ಓಡಿಸಬೇಕು ಎಂದು ರೈತರಲ್ಲಿ ವಿನಂತಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡುತ್ತ ಪ್ರಾಚೀನ ಕಾಲದಿಂದಲೂ ಕೃಷಿಯಿದೆ. ಪಂಚ ವಾರ್ಷಿಕ ಯೋಜನೆಯನ್ನು ಕೊಟ್ಟಿದ್ದು, ಕಾಂಗ್ರೆಸ್ ಪಕ್ಷ. ತಾಂತ್ರಿಕ ಕಾಲೇಜು, ವಿಶ್ವವಿದ್ಯಾನಿಲಯ, ಡ್ಯಾಂಕ್‍ಗಳು ನಮ್ಮ ಪಕ್ಷದ ಕೊಡುಗೆ. ಬ್ಯಾಂಕ್‍ಗಳನ್ನು ರಾಷ್ಟ್ರೀಕರಣಗೊಳಿಸಿದ್ದರಿಂದ ಬಡವರು ಬ್ಯಾಂಕ್‍ಗಳಲ್ಲಿ ವ್ಯವಹರಿಸುವಂತಾಯಿತು. ರೈತರ ಭವಿಷ್ಯ ಹಾಗೂ ದೇಶದ ಸುಭದ್ರತೆಗೆ ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಶ್ರೀಮತಿ ನಜ್ಮತಾಜ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಕಿಸಾನ್ ಸೆಲ್ ವಿಭಾಗದ ಅಧ್ಯಕ್ಷ ನಾಗರಾಜ್, ಕೆ.ಪಿ.ಸಿ.ಸಿ. ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಪದವೀಧರ ವಿಭಾಗದ ಜಿಲ್ಲಾಧ್ಯಕ್ಷ ಮುದಸಿರ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ವೆಂಕಟಶಿವರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ ಸೇರಿದಂತೆ ಕಿಸಾನ್ ಸೆಲ್ ವಿಭಾಗದ ಪದಾಧಿಕಾರಿಗಳು ಹಾಗೂ ರೈತ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
Advertisement