Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

06:59 PM Mar 29, 2024 IST | suddionenews
Advertisement

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ ವ್ಯಕ್ತಪಡಿಸಿದರು.

Advertisement

ನಗರದ ತೇರುಮಲ್ಲೇಶ್ವರ ಸ್ವಾಮಿ ದೇವಾಲಯಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ ದರ್ಶನ ಪಡೆದ ಅವರು ಸುದ್ಧಿಗಾರರ ಜೊತೆ ಮಾತನಾಡಿದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ಇಬ್ಬರು ಜಂಟಿಯಾಗಿ ಪ್ರಚಾರ ಮಾಡುವುದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬರಲಿದೆ. ಹೊರಗಿನವರಿಗೆ ಟಿಕೆಟ್ ನೀಡಿರುವುದಿಂದ ತಮ್ಮ ವಿರುದ್ಧ ಜಿಲ್ಲೆಯಲ್ಲಿ ಬಂಡಾಯ ಎದ್ದಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು
ವರಿಷ್ಠರು ನನಗೆ ಟಿಕೆಟ್ ನೀಡಿದ್ದು ಒಂದೆರಡು ದಿನದಲ್ಲಿ ಎಲ್ಲಾ ಸರಿಯಾಗಲಿದೆ. ಜಿಲ್ಲೆಯಲ್ಲಿ ಯಾವುದೇ ಬಂಡಾಯ ಇಲ್ಲ. ಎರಡೂ ಪಕ್ಷಗಳ ನಾಯಕರು, ಕಾರ್ಯಕರ್ತರು ಒಗ್ಗಟ್ಟಾಗಿ ಸೇರಿ ಚುನಾವಣೆ ಎದುರಿಸಿ ಗೆಲುವು ಸಾಧಿಸಲಿದ್ದೇವೆ ಎಂದರು.

Advertisement

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಜಯಣ್ಣ, ಮಾಜಿ ಜಿಲ್ಲಾಧ್ಯಕ್ಷ ಡಿ ಯಶೋಧರ್, ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್, ಬಿಜೆಪಿ ಮುಖಂಡ ಎನ್ ಆರ್ ಲಕ್ಷ್ಮಿಕಾಂತ್ ಸೇರಿದಂತೆ ಎರಡೂ ಪಕ್ಷದ ಬಹುತೇಕ ಮುಖಂಡರು ಹಾಜರಿದ್ದರು.

Advertisement
Tags :
bengaluruchitradurgaconstituenciesFormer Minister Govinda KarajolaNDA alliancesuddionesuddione newswinsಎನ್..ಡಿ. ಎ. ಮೈತ್ರಿ ಕೂಟಕ್ಷೇತ್ರಗೆಲುವುಚಿತ್ರದುರ್ಗಬೆಂಗಳೂರುಮಾಜಿ ಸಚಿವ ಗೋವಿಂದ ಕಾರಜೋಳಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article