Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನೇಹ ಹಿರೇಮಠ್ ಹತ್ಯೆ ಪ್ರಕರಣ | ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

04:30 PM Apr 22, 2024 IST | suddionenews
Advertisement

Advertisement

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 22 : ಹಾಡು ಹಗಲೇ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹ ಹಿರೇಮಠ್‍ಗೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆಗೈದಿರುವ ಫಯಾಜ್‍ನನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

 

ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ದಾರಿಯುದ್ದಕ್ಕೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು.

ಪ್ರವಾಸಿ ಮಂದಿರದ ಮುಂಭಾಗ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಭಯೋತ್ಪಾದಕರು, ಉಗ್ರಗಾಮಿಗಳು, ಗೂಂಡಾಗಳಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿರಿಯಾನಿ ತಿನ್ನಿಸಿ ಸಾಕಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುತ್ತಿದ್ದರೂ ಕ್ರಮ ಕೈಗೊಳ್ಳಲು ಆಗದ ಹೇಡಿ ಸರ್ಕಾರಕ್ಕೆ ಜನರೆ ತಕ್ಕ ಬುದ್ದಿ ಕಲಿಸುತ್ತಾರೆ. ಮುಸಲ್ಮಾನರನ್ನು ತುಷ್ಠಿಕರಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬೇಕಿಲ್ಲ. ರಾಜ್ಯಾದ್ಯಂತ ಜೈಶ್ರೀರಾಮ್ ಎನ್ನುವ ಘೋಷಣೆ ಕೂಗುತ್ತೇವೆ. ಅದೆಷ್ಟು ಜನರನ್ನು ಜೈಲಿಗೆ ಹಾಕುತ್ತಾರೋ ಹಾಕಲಿ. ಎಂಜಲು ಓಟಿಗಾಗಿ ಹಿಂದೂ ಮಹಿಳೆಯರನ್ನು ಕಾಂಗ್ರೆಸ್ ಬಲಿ ಕೊಡುತ್ತಿದೆ. ಮುಖ್ಯಮಂತ್ರಿಗೆ ನಾಚಿಕೆಯಾಗಬೇಕು. ನೇಹ ಹಿರೆಮಠ್ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಫಯಾಜ್‍ಗೆ ಕಠಿಣ ಶಿಕ್ಷೆಯಾಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

 

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ಕಾಂಗ್ರೆಸ್ ಸರ್ಕಾರದಲ್ಲಿ ನಾಲಾಯಕ್ ಗೃಹಮಂತ್ರಿಯಿರುವುದರಿಂದ ಹಿಂದು ಮಹಿಳೆಯರು, ವಿದ್ಯಾರ್ಥಿನಿಯರಿಗೆ ರಕ್ಷಣೆಯಿಲ್ಲದಂತಾಗಿದೆ. ಪೊಲೀಸರು ನಿಸ್ಪಕ್ಷಪಾತವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಹಾಗಾಗಿ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹ ಹಿರೇಮಠ್ ಕೊಲೆಯಾಗಿದೆ. ಜೈಶ್ರೀರಾಮ್ ಘೋಷಣೆ ಕೂಗುವವರು, ಹನುಮಾನ್ ಚಾಲಿಸ್ ಹಾಕುವವರ ಮೇಲೆ ಹಲ್ಲೆಯಾಗುತ್ತಿದೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವ ದೇಶದ್ರೋಹಿಗಳ ಮೇಲೆ ಕ್ರಮ ಕೈಗೊಳ್ಳಲು ಆಗದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳಿಂದ ಹಿಂದೂಗಳಿಗೆ ರಕ್ಷಣೆಯಿಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಿಂದು ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲದಂತಾಗಿದೆ. ಮತಾಂತರ ಶಕ್ತಿಗಳು ಅಟ್ಟಹಾಸದಿಂದ ಮೆರಯುತ್ತಿದ್ದಾರೆ. ಮುಸಲ್ಮಾನರನ್ನು ಓಲೈಸಲು ಜೈಶ್ರೀರಾಮ್ ಎಂದು ಕೂಗುವವರನ್ನು ಥಳಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಹತ್ಯೆಗೀಡಾಗ ನೇಹ ಹಿರೇಮಠ್ ಕುಟುಂಬಕ್ಕೆ ರಕ್ಷಣೆ ನೀಡುವ ಬದಲು ಹಂತಕ ಫಯಾಜ್‍ಗೆ ಉಪಚಾರ ಮಾಡುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್‍ಸಿದ್ದಾಪುರ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಯುವ ಮುಖಂಡ ಹನುಮಂತೆಗೌಡ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ಬಿಜೆಪಿ. ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾರೆಡ್ಡಿ, ಮಾಜಿ ಸಚಿವ ಬೆಳ್ಳುಬ್ಬಿ, ಡಾ.ಸಿದ್ದಾರ್ಥ, ಸಂಪತ್, ಭಾರತಿ, ಕವನ, ಮಂಜುಳ, ಬಸಮ್ಮ, ಪೂರ್ಣಿಮ, ನಗರಸಭೆ ಸದಸ್ಯರುಗಳಾದ ವೆಂಕಟೇಶ್, ಹರೀಶ್, ಭಾಸ್ಕರ್, ಸುರೇಶ್, ತಿಪ್ಪಮ್ಮ ವೆಂಕಟೇಶ್, ತಾರಕೇಶ್ವರಿ, ಅನುರಾಧ ರವಿಕುಮಾರ್, ಭಾಗ್ಯಮ್ಮ, ನಗರ ಮೋರ್ಚಾ ಅಧ್ಯಕ್ಷೆ ಶೀಲ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
AccusedbengaluruBjpchitradurgaHangMassive protestmurder caseNeha Hiremathsuddionesuddione newsಆರೋಪಿಒತ್ತಾಯಗಲ್ಲಿಗೇರಿಸಿಚಿತ್ರದುರ್ಗನೇಹ ಹಿರೇಮಠ್ಪ್ರಕರಣಬಿಜೆಪಿಬೃಹತ್ ಪ್ರತಿಭಟನೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹತ್ಯೆ
Advertisement
Next Article