ಆಗಸ್ಟ್ 24 ರಂದು ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ
ಸುದ್ದಿಒನ್, ಚಿತ್ರದುರ್ಗ,ಆಗಸ್ಟ್. 22 : ಕುಂಚಿಗ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಆ.24 ರಂದು ಬೆಳಿಗ್ಗೆ 10-45 ಕ್ಕೆ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಕುಂಚಿಗ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆÀ ಪ್ರತಿಭಾ ಪುರಸ್ಕಾರ ಹಾಗೂ ಡಾ.ಎಂ.ಯೋಗೇಂದ್ರ, ಡಾ.ಅರವಿಂದ ಪಾಟೀಲ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಗುವುದು.
ಮಾಜಿ ಶಾಸಕ, ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಬಿ.ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸುವರು. ಗೌರವಾಧ್ಯಕ್ಷ ಹಾಗೂ ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪರಮೇಶ್ವರಪ್ಪ, ಮಾಜಿ ಶಾಸಕರುಗಳಾದ ಟಿ.ಹೆಚ್.ಬಸವರಾಜ್, ಪಿ.ರಮೇಶ್, ನಿವೃತ್ತ ಪ್ರಾಚಾರ್ಯರಾದ ಬಿ.ಸಿ.ಕಾಂತರಾಜ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಕಾರ್ಯದರ್ಶಿ ಹೆಚ್.ಕುಬೇರಪ್ಪ ದಗ್ಗೆ ಮನವಿ ಮಾಡಿದ್ದಾರೆ.