Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಆಗಸ್ಟ್ 24 ರಂದು ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ

04:45 PM Aug 22, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ,ಆಗಸ್ಟ್. 22  : ಕುಂಚಿಗ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಆ.24 ರಂದು ಬೆಳಿಗ್ಗೆ 10-45 ಕ್ಕೆ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಕುಂಚಿಗ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆÀ ಪ್ರತಿಭಾ ಪುರಸ್ಕಾರ ಹಾಗೂ ಡಾ.ಎಂ.ಯೋಗೇಂದ್ರ, ಡಾ.ಅರವಿಂದ ಪಾಟೀಲ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಗುವುದು.

Advertisement

ಮಾಜಿ ಶಾಸಕ, ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಬಿ.ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸುವರು.  ಗೌರವಾಧ್ಯಕ್ಷ ಹಾಗೂ ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪರಮೇಶ್ವರಪ್ಪ, ಮಾಜಿ ಶಾಸಕರುಗಳಾದ ಟಿ.ಹೆಚ್.ಬಸವರಾಜ್, ಪಿ.ರಮೇಶ್, ನಿವೃತ್ತ ಪ್ರಾಚಾರ್ಯರಾದ ಬಿ.ಸಿ.ಕಾಂತರಾಜ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕುಂಚಿಗ ವೀರಶೈವ ಲಿಂಗಾಯತ ಸಮಾಜದ ಕಾರ್ಯದರ್ಶಿ ಹೆಚ್.ಕುಬೇರಪ್ಪ ದಗ್ಗೆ ಮನವಿ ಮಾಡಿದ್ದಾರೆ.

Advertisement
Tags :
awardedbengaluruchitradurgahonouredKunchiga Veerashaiva Lingayat Samajasuddionesuddione newsಕುಂಚಿಗ ವೀರಶೈವ ಲಿಂಗಾಯತ ಸಮಾಜಚಿತ್ರದುರ್ಗಪ್ರತಿಭಾ ಪುರಸ್ಕಾರಪ್ರತಿಭಾವಂತ ವಿದ್ಯಾರ್ಥಿಗಳುಬೆಂಗಳೂರುಸನ್ಮಾನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article