ಆಗಸ್ಟ್ 24 ರಂದು ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮ
ಸುದ್ದಿಒನ್, ಚಿತ್ರದುರ್ಗ,ಆಗಸ್ಟ್. 21 : ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಚಿತ್ರದುರ್ಗ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಆಯ್ದ ಐವತ್ತು ಪ್ರೌಢಶಾಲೆಗಳಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯವಾಕ್ಯದೊಂದಿಗೆ ನಾಡಗೀತೆ, ರಾಷ್ಟ್ರಗೀತೆ ಪ್ರಾಯೋಗಿಕ ಗಾಯನ ತರಬೇತಿ, ಕನ್ನಡ ಗೀತಗಾಯನ, ಕವಿಕಾವ್ಯ ಪರಿಚಯ ಹಾಗೂ ಯೋಗ ತರಬೇತಿ ಕಾರ್ಯಕ್ರಮ ಆಗಸ್ಟ್ 24 ರಂದು ಶನಿವಾರ ಬೆಳಿಗ್ಗೆ 8-30 ಗಂಟೆಗೆ ಹಿರೇಗುಂಟನೂರು ಗ್ರಾಮದ ಶ್ರೀ ದ್ಯಾಮಲಾಂಭ ಪ್ರೌಢಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ.
ಹಿರೇಗುಂಟನೂರು ಗ್ರಾ.ಪಂ ಅಧ್ಯಕ್ಷೆ ರಾಧಮ್ಮ.ಜಿ.ಹೇಮಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಶಿಕ್ಷಕ ಟಿ.ಧನಂಜಯ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಕಂದಾಯ ನಿರೀಕ್ಷಕ ಮೋಹನ್‍ಕುಮಾರ್, ಸಹಶಿಕ್ಷಕರಾದ ತಿಪ್ಪೇಸ್ವಾಮಿ ಕೆ.ಹೆಚ್, ಚಿಕ್ರಪ್ಪನವರ ಸಿದ್ಧನಗೌಡ, ಆರ್.ವಿದ್ಯಾಶ್ರೀ, ದೈಹಿಕಶಿಕ್ಷಕ ಪಿ.ಪುರುಷೋತ್ತಮ, ದ್ವಿ.ದ.ಸ ಎನ್.ಮರುಳಸಿದ್ದಯ್ಯ ಮುಖ್ಯಅತಿಥಿಗಳಾಗಿ ಉಪಸ್ಥಿತರಿರುವರು. ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ, ಸಂಗೀತ ಕಲಾವಿದ ಜಿ.ವಿ.ಮಾರುತೇಶ ಹಾಗೂ ಯೋಗಶಿಕ್ಷಕ ಎಂ.ಬಿ.ಮುರುಳಿ ಇವರು ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ವಿದ್ಯಾರ್ಥಿ/ನಿಯರಿಗೆ ಸರ್ಕಾರ ನಿಗಧಿಪಡಿಸಿದ ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ, ಹುಯಿಲುಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಕುವೆಂಪು ವಿರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆಯವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ಧಯ್ಯ ಪುರಾಣಿಕ ಬರೆದ ಹೊತ್ತಿತೋ ಹೊತ್ತಿತೂ ಕನ್ನಡದ ದೀಪ, ಚನ್ನವೀರ ಕಣವಿಯವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡದ ಧ್ವನಿಮುದ್ರಿತ ಗೀತೆಗಳೊಂದಿಗೆ ಯೋಗ ತರಬೇತಿ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಕೆ.ಮೋಹನ್‍ಕುಮಾರ್ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.