Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಆಗಸ್ಟ್ 27 ಮತ್ತು 28 ರಂದು ಚಿತ್ರದುರ್ಗ ಜಿಲ್ಲೆಯಾದ್ಯಂತ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ದೂರು ಸ್ವೀಕಾರ

07:02 PM Aug 23, 2024 IST | suddionenews
Advertisement

 

Advertisement

ಚಿತ್ರದುರ್ಗ. ಆ.23: ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಇದೇ ಆಗಸ್ಟ್ 27 ಮತ್ತು 28 ರಂದು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಹಾಗೂ ಅವಹಾಲು ಸ್ವೀಕರಿಸುವರು.

ಇದೇ ಆಗಸ್ಟ್ 27ರಂದು ಮಂಗಳವಾರ ಬೆಳಿಗ್ಗೆ 10.30 ರಿಂದ 1.30 ರವರೆಗೆ ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಹಾಗೂ ಹೊಸದುರ್ಗ ಪುರಸಭೆ ಹಾಗೂ  ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ನಗರಸಭೆ ಹಾಗೂ ಹೊಳಲ್ಕೆರೆ ಪುರಸಭೆಯಲ್ಲಿ ಅಹವಾಲು ಸ್ವೀಕರಿಸುವರು.

Advertisement

ಆಗಸ್ಟ್ 28ರಂದು ಬುಧವಾರ ಬೆಳಿಗ್ಗೆ 10.30 ರಿಂದ 1.30 ರವರೆಗೆ ಹಿರಿಯೂರು ನಗರಸಭೆ ಕಚೇರಿಯಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ಚಿತ್ರದುರ್ಗ ನಗರಸಭೆ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಲು ಅಲ್ಲಿನ ಅಧಿಕಾರಿ, ಸಿಬ್ಬಂದಿ ಲಂಚಕ್ಕಾಗಿ ಬೇಡಿಕೆ, ಯೋಜನೆಗಳ ಅನುಷ್ಠಾನದಲ್ಲಿ ಅನಾವಶ್ಯಕ ವಿಳಂಬ, ಕರ್ತವ್ಯದಲ್ಲಿ ನಿರ್ಲಕ್ಷತನ, ತಾರತಮ್ಯ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವ ಕುರಿತು ಸಾರ್ವಜನಿಕರು ನಿಗದಿತ ಅರ್ಜಿ ನಮೂನೆಯಲ್ಲಿ ದೂರು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
Augustbengaluruchitradurgachitradurga districtLokayuktaOfficialspublic complaintssuddionesuddione newsಅಧಿಕಾರಿಗಳುಆಗಸ್ಟ್ಚಿತ್ರದುರ್ಗಚಿತ್ರದುರ್ಗ ಜಿಲ್ಲೆದೂರು ಸ್ವೀಕಾರಬೆಂಗಳೂರುಲೋಕಾಯುಕ್ತಸಾರ್ವಜನಿಕರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article