For the best experience, open
https://m.suddione.com
on your mobile browser.
Advertisement

ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಡಿಸೆಂಬರ್ 23 ಮತ್ತು 24 ರಂದು ದಾವಣಗೆರೆಯಲ್ಲಿ 24 ನೇ ಮಹಾ ಅಧಿವೇಶನ : ಅಣಬೇರು ರಾಜಣ್ಣ

06:39 PM Dec 12, 2023 IST | suddionenews
ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಿಸೆಂಬರ್ 23 ಮತ್ತು 24 ರಂದು ದಾವಣಗೆರೆಯಲ್ಲಿ 24 ನೇ ಮಹಾ ಅಧಿವೇಶನ   ಅಣಬೇರು ರಾಜಣ್ಣ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.12 : ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ದಾವಣಗೆರೆ ಜಿಲ್ಲಾ ಘಟಕದಿಂದ ಡಿ.23 ಮತ್ತು 24 ರಂದು ದಾವಣಗೆರೆ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ 24 ನೇ ಮಹಾ ಅಧಿವೇಶನ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಅಣಬೇರು ರಾಜಣ್ಣ ತಿಳಿಸಿದರು.

Advertisement

ಮಹಾ ಅಧಿವೇಶನಕ್ಕೆ ಸಂಬಂಧಿಸಿದಂತೆ ರೋಟರಿ ಬಾಲಭವನದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಣಬೇರು ರಾಜಣ್ಣ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರ ಮುಂದಾಳತ್ವದಲ್ಲಿ ನಡೆಯಲಿರುವ ಎರಡು ದಿನಗಳ ಮಹಾ ಅಧಿವೇಶನದಲ್ಲಿ ವೀರಶೈವ-ಲಿಂಗಾಯತರು ನಾಡಿನ ಮೂಲೆ ಮೂಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಲ ತುಂಬಬೇಕಿದೆ ಎಂದು ಮನವಿ ಮಾಡಿದರು.

ಎರಡು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿರುವ 24 ನೇ ಮಹಾ ಅಧಿವೇಶನದಲ್ಲಿ ವೀರಶೈವ-ಲಿಂಗಾಯತರ ಅನೇಕ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು.

ಹಿಂದಿನಿಂದಲೂ ನಮಗೆ ಅನ್ಯಾಯವಾಗುತ್ತಿದೆ. ಒಳಪಂಗಡಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿರುವುದರಿಂದ ಕೇಂದ್ರ ಓ.ಬಿ.ಸಿ. ಪಟ್ಟಿಗೆ ಸೇರಿಸಬೇಕೆಂದು ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಒಳಜಗಳ ಬಿಟ್ಟು ಎಲ್ಲರೂ ಒಂದಾಗಬೇಕಿದೆ. ನನಗೆ ಪಕ್ಷ ಮುಖ್ಯವಲ್ಲ.

ವೀರಶೈವ-ಲಿಂಗಾಯತರು ಮುಖ್ಯ ಎಂದು ಶಾಮನೂರು ಶಿವಶಂಕರಪ್ಪನವರು ಸ್ಪಷ್ಟವಾಗಿ ಹೇಳಿದ್ದಾರೆನ್ನುವುದನ್ನು ನೆನಪಿಸಿಕೊಂಡರು.
ಹೋರಾಟವಿದ್ದರೆ ಮಾತ್ರ ಆಳುವ ಸರ್ಕಾರಗಳು ಮಣಿಯುತ್ತವೆ. ಐದಾರು ವರ್ಷಗಳಲ್ಲಿ 2.50 ಲಕ್ಷ ಸದಸ್ಯರುಗಳು ನೊಂದಣಿಯಾಗಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಮಹಾ ಅಧಿವೇಶನಕ್ಕೆ ಬರುವವರಿಗೆ ಯಾವುದೇ ತೊಂದರೆಯಾಗದಂತೆ ಊಟದ ವ್ಯವಸ್ಥೆ ಕಲ್ಪಿಸಿ ಬಸ್ ಸಂಚಾರ ಕೂಡ ಒದಗಿಸಲಾಗುವುದು. ರಾಜಕಾರಣಿಗಳು, ಸ್ವಾಮೀಜಿಗಳು, ಸಾಹಿತಿಗಳು ಮಹಾ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಅನೇಕ ವಿಚಾರಗೋಷ್ಠಿಗಳಿರುತ್ತವೆ ಎಂದು ಹೇಳಿದರು.

ಎಸ್.ವೀರೇಶ್, ಬೆಂಗಳೂರು ನಗರ ಯುವ ಘಟಕದ ಅಧ್ಯಕ್ಷ ಲಿಂಗರಾಜು, ಹೊಸದುರ್ಗ ಘಟಕದ ಅಧ್ಯಕ್ಷ ಓಂಕಾರಪ್ಪ, ನಗರ ಘಟಕದ ಅಧ್ಯಕ್ಷ ಆನಂದ್, ಮಹಿಳಾ ಘಟಕದ ಅಧ್ಯಕ್ಷೆ ರೀನಾ ವೀರಭದ್ರಪ್ಪ, ಕಾರ್ಯದರ್ಶಿ ಮಹೇಶ್, ವೀಣಾ ಸುರೇಶ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

Tags :
Advertisement