For the best experience, open
https://m.suddione.com
on your mobile browser.
Advertisement

ಜನವರಿ 28 ರಂದು ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿ ಸಮಾವೇಶ : ರಾಮಚಂದ್ರಪ್ಪ

04:18 PM Jan 05, 2024 IST | suddionenews
ಜನವರಿ 28 ರಂದು ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿ ಸಮಾವೇಶ   ರಾಮಚಂದ್ರಪ್ಪ
Advertisement

Advertisement

ವರದಿ ಮತ್ತು ಫೋಟೋ ಕೃಪೆ
                           ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 05 :  ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರವು ಈ ಕೂಡಲೇ ಸ್ವೀಕರಿಸಿ ವರದಿಯನ್ನು ಯಥಾವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು, ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು ಸೇರಿದಂತೆ ಇತರೆ ಹಕ್ಕೂತ್ತಾಯಗಳನ್ನು ಜ. 28 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಶೋಷಿತರ ಜಾಗೃತಿ ಸಮಾವೇಶದಲ್ಲಿ ಸರ್ಕಾರಕ್ಕೆ ಒತ್ತಾಯಿಸಲಾಗುವುದೆಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ ತಿಳಿಸಿದರು.

Advertisement

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನವರಿ- 28ರಂದು ಚಿತ್ರದುರ್ಗ ನಗರದ ಶ್ರೀ ಮಾದಾರ ಚನ್ನಯ್ಯ ಗುರು ಪೀಠದ ಪಕ್ಕದ 150 ಎಕ್ಕರೆ ವಿಸ್ತೀರ್ಣ ಪ್ರದೇಶದಲ್ಲಿ ಶೋಷಿತರ ಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ  ರಾಜ್ಯದ ಎಲ್ಲಾ ಶೋಷಿತ ಸಮುದಾಯಗಳ ಮುಖಂಡರನ್ನು ಆಹ್ವಾನಿಸಿದ್ದೇವೆ.ಈ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವುದಾಗಿ ತಿಳಿಸಿದ್ದಾರೆ. ಹಾಗೆಯೇ ಉಪಮುಖ್ಯಮಂತ್ರಿಗಳಾದ  ಡಿ.ಕೆ ಶಿವಕುಮಾರರವರನ್ನು ಸಹ ಆಹ್ವಾನಿಸಿದ್ದೇವೆ..ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಶೋಷಿತ ಸಮುದಾಯಗಳ ಕಾರ್ಯಕರ್ತರು, ಮುಖಂಡರು ಭಾಗವಹಿಸಲಿದ್ದು ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದರು.

ಭಾರತ ಹಲವು ವೈವಿದ್ಯತೆಯ ದೇಶ, ಸರ್ವಜನಾಂಗದ ಶಾಂತಿಯ ತೋಟ. ಆದರೆ ಬ್ರಾಹ್ಮಣ ಶಾಹಿಯ ಕುತಂತ್ರದಿಂದಾಗಿ ದೇಶದ ಸಂಪತ್ತು ಸಮಾನವಾಗಿ ಹಂಚಿಕೆಯಾಗದೆ ಶೇ.97%ರಷ್ಟು ತಳ ಸಮುದಾಯಗಳು ಸಾವಿರಾರು ವರ್ಷಗಳಿಂದ ಸಂಕಷ್ಟವನ್ನು ಅನುಭವಿಸಿದವು. ಡಾ. ಬಾಬಾಸಾಹೇಬ್ ಅಂಬೇಡ್ಕರ್ರವರ ಸಂವಿದಾನದಿಂದ ಕಳೆದ 70 ವರ್ಷಗಳಿಂದ ವಿದ್ಯೆ, ಉದ್ಯೋಗ, ಅಧಿಕಾರ, ಅಂತಸ್ತು, ಸಮಾಗತೆಗಳನ್ನು ಪಡೆದು ದೇಶದ ಮೂಲ ನಿವಾಸಿಗಳು ಪ್ರಗತಿಯತ್ತ ಮುನ್ನಡೆಯುತ್ತಿದ್ದಾರೆ. ಇದನ್ನು ಸಹಿಸಲಾಗದ ಪುರೋಹಿತಶಾಹಿ ವರ್ಗ ಮುಸಲ್ಮಾನರೆಂಬ ಬೆದರು ಬೊಂಬೆಯ ಭಯ ಹುಟ್ಟಿಸಿ ತಮ್ಮ ಸ್ವಾರ್ಥಕ್ಕಾಗಿ ತಳ ಸಮುದಾಯದ ಯುವಕರುಗಳನ್ನು ಮರಳು ಮಾಡುತ್ತಿವೆ. ಅವರ ಮಾತಿಗೆ ಮರಳಾಗದೆ ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ, ಸ್ವಾಭಿಮಾನದ, ಸಂರಕ್ಷಣೆಗಾಗಿ ಐಕ್ಯತೆಯಿಂದ ಹೋರಾಡಬೇಕಿದೆ ಎಂದರು.

ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ ಸಾಮಾಜ ಸಮಾನತೆ ಸಾರಿದ ಕರ್ನಾಟಕ ಅಗ್ರಗಣ್ಯ ರಾಜ್ಯ ಹಲವು ಹಿಂದುಳಿದ ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ಜಾರಿಯಾಗಿದೆ. ಆದರೆ ಬಲಾಡ್ಯರು ಶೋಷಿತರ ಪಾಲನ್ನು ಕಬಳಿಸುತ್ತಿರುವುದು ಶೋಚನೀಯ. ಇಂದಿರಾಸಹಾನಿ ಕೇಸಿನಲ್ಲಿ ಸಂಕೋರ್ಟ್ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಿಕೊಳ್ಳುವಂತೆ ರಾಜ್ಯಗಳಿಗೆ ನಿರ್ದೇಶಿಸಿದೆ. ಆ ಪ್ರಕಾರ ಎಲ್ಲಾ ರಾಜ್ಯಗಳು ಆಯೋಗ ರಚಿಸಿ ಎಲ್ಲಾ ಜಾತಿಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಿಂದುಳಿದಿರುವಿಕೆಯನ್ನು ಗುರುತಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಅಧ್ಯಯನಗಳನ್ನು ಪರಿಶೀಲಿಸಿ ಎಲ್ಲಾ ಜಾತಿಯವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು ಎಂಬುದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಒತ್ತಾಯವಾಗಿದೆ.

ಈ ಸಮಾವೇಶದಲ್ಲಿ ಪ್ರಮುಖವಾದ ಹಕ್ಕೂತ್ತಾಯಗಳನ್ನು  ಮಾಡಲಿದ್ದು, ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರವು ಈ ಕೂಡಲೇ ಸ್ವೀಕರಿಸಿ ವರದಿಯನ್ನು ಯಥಾವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು, ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು EWS ಶೇ.10 % ಮೀಸಲಾತಿಯನ್ನು ರದ್ದುಪಡಿಸಬೇಕು, ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು.. ರಾಜಕೀಯ ಮೀಸಲಾತಿಯನ್ನು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು.ಜನಸಂಖ್ಯೆಗೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಿಸಬೇಕು ಖಾಸಗಿ ಕ್ಷೇತ್ರಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಗುವುದೆಂದು ತಿಳಿಸಿದರು.

ಗೋಷ್ಟಿಯಲ್ಲಿ ವೆಂಕಟರಾಮಯ್ಯ, ಸುಬ್ರಮಣ್ಯ, ವೆಂಕಟಸುಬ್ಬರಾವ್, ಬಿಟಿ ಜಗದೀಶ್, ನಿರಂಜನ ಮೂರ್ತಿ, ಖಾಸಿಂ ಆಲಿ, ಶ್ರೀರಾಮ್, ರಾಮಜ್ಜ, ಎನ್.ಡಿ.ಕುಮಾರ್, ಶ್ರೀಮತಿ ಶಶಿಕಲಾ ಸುರೇಶ್ ಬಾಬು, ಮೂರ್ತಿ, ಪ್ರತಾಪ್ ಜೋಗಿ, ಲಕ್ಷ್ಮಿಕಾಂತ, ಷಫಿವುಲ್ಲಾ, ರಾಜಣ್ಣ, ಮಂಜುನಾಥ್ ದುರುಗೇಶಪ್ಪ, ಸಿಟಿ.ಕೃಷ್ಣಮೂರ್ತಿ, ಪ್ರಕಾಶಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.

Tags :
Advertisement