Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಜೂನ್ 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ : ಕೆ.ಎಸ್.ನವೀನ್ ಮಾಹಿತಿ

04:27 PM Jun 26, 2024 IST | suddionenews
Advertisement

 

Advertisement

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಜೂನ್.26 : ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಠಾಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಜೂ.28 ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಶಾಸಕರು, ಮಾಮಿ ಶಾಸಕರು, ಪಕ್ಷದ ಕಾರ್ಯಕರ್ತರು, ರಾಜ್ಯದಿಂದ ಅನೇಕ ಮುಖಂಡರು ಮುತ್ತಿಗೆಯಲ್ಲಿ ಭಾಗವಹಿಸಲಿದ್ದಾರೆಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಣ ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ತನಿಖೆಯನ್ನು ಸಿಬಿಐ.ಗೆ ವಹಿಸಬೇಕೆಂದು ರಾಷ್ಟ್ರೀಕೃತ ಬ್ಯಾಂಕ್‍ಗಳು ಹೇಳಿದಾಗ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ನಾಗೇಂದ್ರರವರಿಂದ ರಾಜಿನಾಮೆ ಪಡೆದಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಇದರಲ್ಲಿ ನನ್ನದೇನು ಪಾತ್ರವಿಲ್ಲವೆಂದು ಬಣ್ಣ ಹಚ್ಚುತ್ತಿದ್ದಾರೆ. ಹೈದರಾಬಾದ್‍ನ ಬಾರ್‍ಗಳಲ್ಲಿ ಹಣ ಹರಿದಾಡುತ್ತಿದೆ. ಏಳುನೂರು ನಕಲಿ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಸತ್ಯಾಸತ್ಯತೆಯನ್ನು ಬಯಲಿಗೆಳೆದು ತನಿಖೆಯನ್ನು ಚುರುಕುಗೊಳಿಸುವಂತೆ ಒತ್ತಾಯಿಸಿದರು.

ಬಡವರು, ಮಹಿಳೆಯರು, ವಿದ್ಯಾರ್ಥಿಗಳ ನೆರವಿಗೆ ಬಳಬೇಕಾಗಿದ್ದ ವಾಲ್ಮೀಕಿ ಅಭಿವೃದ್ದಿ ನಿಗಮದ ಹಣವನ್ನು ಬೇರೆ ಬೇರೆ ಉದ್ದೇಶಗಳಿಗೆ ರಾಜ್ಯ ಸರ್ಕಾರ ಬಳಸಿರುವುದರಿಂದ ಜನರ ರಕ್ತ ಕುದಿಯುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಯಲ್ಲಿ ಜಿಲ್ಲೆಯ ಜನ ಸೇರಿದಂತೆ ದಾವಣಗೆರೆ, ಜಗಳೂರು, ಸಿರಾ, ಪಾವಗಡದಿಂದಲೂ ನಮ್ಮ ಕಾರ್ಯಕರ್ತರು ಪಾಲ್ಗೊಳ್ಳುವರು. ಕೇಂದ್ರ ಮತ್ತು ರಾಜ್ಯದ ಹಣವನ್ನು ಕಾಂಗ್ರೆಸ್ ಸರ್ಕಾರ ನುಂಗಿ ಹಾಕಿದೆ. ಹಗರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನು ಬಂಧಿಸಿಲ್ಲ. ತನಿಖೆ ಆಳಕ್ಕೆ ಇಳಿದಂತೆಲ್ಲಾ ಹಗರಣದಲ್ಲಿ ಒಬ್ಬೊಬ್ಬರೆ ಶಾಮೀಲಾಗಿರುವುದು ಬೆಳಕಿಗೆ ಬರುತ್ತಿದೆ ಎಂದರು.

ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ನೇರ್ಲಗುಂಟೆ ಮಾತನಾಡಿ ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ.ಗಳ ಹಗರಣವಾಗಿದೆ. ರಾಜ್ಯ ಸರ್ಕಾರಕ್ಕೆ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗದ ಹಣವೇ ಬೇಕಿತ್ತ. 25 ಸಾವಿರ ಕೋಟಿ ರೂ.ಗಳನ್ನು ಕೊಳ್ಳೆ ಹೊಡೆದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಟ್ಟಿ ಭಾಗ್ಯಗಳಿಗೆ ಬಳಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಯಾರು ಹೊಣೆ? ಎನ್ನುವುದನ್ನು ಪ್ರಶ್ನಿಸುವುದಕ್ಕಾಗಿಯೇ ಮದಕರಿನಾಯಕನ ನೆಲದಲ್ಲಿ ನಾಳೆ ಪ್ರತಿಭಟನೆ ಮಾಡುತ್ತಿದ್ದೇವೆ. ಕಾರ್ಯಕರ್ತರು ಹಾಗೂ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಬಿಜೆಪಿ‌ ಮುಖಂಡ ಕುಮಾರಸ್ವಾಮಿ ಮಾತನಾಡುತ್ತ ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರವಾಗಿದ್ದು, ನೆರೆಯ ಆಂಧ್ರ ರಾಜ್ಯದ ಚುನಾವಣೆಗೆ ವರ್ಗಾಯಿಸಲಾಗಿದೆ. ಜೂ.28 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಸಂಬಂಧ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿರವರು ಜಿಲ್ಲೆಯ ಆರು ತಾಲ್ಲೂಕುಗಳಲ್ಲಿಯೂ ಸಭೆ ನಡೆಸಿ ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅರಿವು ಮೂಡಿಸಿದ್ದಾರೆಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್‍ ಸಿದ್ದಾಪುರ, ಪಿ.ಸಂಪತ್‍ಕುಮಾರ್, ಎಸ್ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಪಾಲಯ್ಯ, ಯುವ ಮುಖಂಡ ಹುನುಮಂತೇಗೌಡ, ಸೋಮೇಂದ್ರ, ಕವನ ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement
Tags :
bengaluruby vijayendraChief Minister SiddaramaiahchitradurgaKS Naveenleadershipresignationsuddionesuddione newsಕೆ.ಎಸ್.ನವೀನ್ ಮಾಹಿತಿಚಿತ್ರದುರ್ಗಜಿಲ್ಲಾಧಿಕಾರಿ ಕಚೇರಿಜೂನ್ನೇತೃತ್ವಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಮುತ್ತಿಗೆರಾಜೀನಾಮೆವಿಜಯೇಂದ್ರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article