Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಗೋವಿಂದ ಕಾರಜೋಳರವರನ್ನು ಅತಿ ಹೆಚ್ಚು ಮತಗಳ ಅಂತರಿಂದ ಗೆಲ್ಲಿಸುವುದು ನಮ್ಮ ಗುರಿ :  ಬಿ.ಕಾಂತರಾಜ್

05:47 PM Apr 19, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಏ.19 :  ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಎನ್.ಡಿ.ಎ. ಅಭ್ಯರ್ಥಿ ಗೋವಿಂದ ಕಾರಜೋಳರವರನ್ನು ಅತಿ ಹೆಚ್ಚು ಮತಗಳ ಅಂತರಿಂದ ಗೆಲ್ಲಿಸುವುದು ನಮ್ಮ ಗುರಿ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ತಿಳಿಸಿದ್ದಾರೆ.

Advertisement

ಚಿತ್ರದುರ್ಗ ನಗರದ ಕೋಟೆ ರಸ್ತೆಯಲ್ಲಿನ ಕಾಳಮ್ಮ ದೇವಾಲಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಅಮ್ಮನವರಿಗೆ ಪೂಜೆಯನ್ನು ಸಲ್ಲಿಸಿ ಪ್ರಚಾರ ಕಾರ್ಯವನ್ನು ಆರಂಭಿಸಿ ನಂತರ ಮಾತನಾಡಿದ ಅವರು, ರಾಜ್ಯ ಮಟ್ಟದಲ್ಲಿ ನಮ್ಮ ನಾಯಕರಾದ ರಾಷ್ಟ್ರೀಯ ನಾಯಕರಾದ ದೇವೇಗೌಡರವರು ಮತ್ತು ರಾಜ್ಯ ನಾಯಕರಾದ ಕುಮಾರಸ್ವಾಮಿಯವರು ಬಿಜೆಪಿಯ ಜೊತೆಯಲ್ಲಿ ಹೋಂದಾಣಿಕೆಯನ್ನು ಮಾಡಿಕೊಂಡಿದ್ದಾರೆ ಈ ಹಿನ್ನಲೆಯಲ್ಲಿ ನಮ್ಮ ಪಕ್ಷ ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರ ಪರವಾಗಿ ಪ್ರಚಾರವನ್ನು ಮಾಡುವುದಲ್ಲದೆ ಅವರ ಗೆಲುವಿಗಾಗಿ ಶ್ರಮ ಹಾಕಲಿದೆ ಎಂದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ 8 ಕ್ಷೇತ್ರಗಳಿದ್ದು ಇದರಲ್ಲಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರು ಸಹಾ ಬಿಜೆಪಿಯೊಂದಿಗೆ ನಮ್ಮ ಪಕ್ಷ ಸಾಥ್ ನೀಡಲಿದೆ ಎಂಟು ಕ್ಷೇತ್ರದಲ್ಲಿಯೂ ಸಹಾ ಜೆಡಿಎಸ್ ಮುಖಂಡರು, ಹಾಗೂ ಕಾರ್ಯಕರ್ತರು ಬಿಜೆಪಿ  ಗೆಲುವಿಗೆ ತಮ್ಮ ಶ್ರಮವನ್ನು ಹಾಕಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಚಿತ್ರದುರ್ಗದ ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತಗಳ ಅಂತರದಿಂದ ಗೆಲುವನ್ನು ಸಾಧಿಸಲಿದ್ದಾರೆ. ಎಂದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ಸಹಾ ಮತದಾರ ಕೇಂದ್ರದಲ್ಲಿ ಮೋದಿಯವರೇ ಇರಬೇಕು ಎಂದು ಆಸೆಯನ್ನು ಪಟ್ಟಿದ್ದಾರೆ ಕಳೆದ ಎರಡು ಬಾರಿ ಮೋದಿಯವರು ಪ್ರಧಾನ ಮಂತ್ರಿಯಾಗಿ ಹಲವಾರು ಅಭೀವೃದ್ದಿ ಕಾರ್ಯವನ್ನು ಮಾಡಿದ್ದಾರೆ ಮುಂದೆ ಇವರೇ ಪ್ರಧಾನ ಮಂತ್ರಿಯಾದರೆ ದೇಶ ಮತ್ತಷ್ಟು ಅಭೀವೃದ್ದಿ ಹೊಂದಲಿದೆ ಎಂಬ ನಂಬಿಕೆ ಇದೆ. ಈ ಹಿನ್ನಲೆಯಲ್ಲಿ ಮತದಾರ ಕೇಂದ್ರದಲ್ಲಿ ಮೋದಿಯನ್ನು ಪ್ರಧಾನ ಮಂತ್ರಿಯಾಗಿ ನೋಡಲು ಬಯಸಿದ್ದರಿಂದ ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧ್ಯವಾಗಲಿದೆ ಎಂದು ಕಾಂತರಾಜ್ ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ವೆಂಕಟೇಶ್, ತಿಪ್ಪಮ್ಮ ವೆಂಕಟೇಶ್, ಶಶಿಧರ್, ಭಾಸ್ಕರ್, ಹರೀಶ್, ತಾರಕೇಶ್ವರಿ, ಭಾಗ್ಯಮ್ಮ, ವಿರೇಶ್, ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯ್ಕ್, ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಮಂಜುನಾಥ್, ಬಿಜೆಪಿಯ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಸದಸ್ಯ ಲಿಂಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ನಗರಸಭೆಯ 1 ರಿಂದ 5 ನೇ ವಾರ್ಡವರೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ಎನ್.ಡಿ.ಎ.ಅಭ್ಯರ್ಥಿ ಗೋವಿಂದ ಕಾರಜೋಳ ರವರ ಪರವಾಗಿ ಮತಯಾಚನೆಯನ್ನು ಮಾಡಿದರು.

Advertisement
Tags :
B. KantarajbengaluruchitradurgaGovinda Karajolmaximum number of votessuddionesuddione newsಗೋವಿಂದ ಕಾರಜೋಳಚಿತ್ರದುರ್ಗಬಿ.ಕಾಂತರಾಜ್ಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article