For the best experience, open
https://m.suddione.com
on your mobile browser.
Advertisement

ಕಾಂಗ್ರೆಸ್ ಆಡಳಿತಕ್ಕೆ ಜನರ ಮೆಚ್ಚುಗೆ, ಬಿಜೆಪಿಯಲ್ಲಿ ನಡುಕು : ಮಾಜಿ ಸಚಿವ ಆಂಜನೇಯ

09:08 PM Apr 08, 2024 IST | suddionenews
ಕಾಂಗ್ರೆಸ್ ಆಡಳಿತಕ್ಕೆ ಜನರ ಮೆಚ್ಚುಗೆ  ಬಿಜೆಪಿಯಲ್ಲಿ ನಡುಕು   ಮಾಜಿ ಸಚಿವ ಆಂಜನೇಯ
Advertisement

ಸುದ್ದಿಒನ್, ಹೊಳಲ್ಕೆರೆ, ಏ.8 : ಕಾಂಗ್ರೆಸ್ ಪಕ್ಷದ ಆಡಳಿತಕ್ಕೆ ಯಾವುದೇ ಪಕ್ಷದ ಸರ್ಕಾರ ಸರಿಸಾಟಿ ಆಗಿ ಇಲ್ಲಿಯವರೆಗೂ ಆಡಳಿತ ನೀಡಿಲ್ಲ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

Advertisement
Advertisement

ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ, ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.

Advertisement

ಬ್ರೀಟಿಷರು ದೋಚಿದ್ದ ಭಾರತವನ್ನು ಮರು ನಿರ್ಮಾಣ ಮಾಡುವಲ್ಲಿ ಕಾಂಗ್ರೆಸ್ ಸಾಧನೆ ಬಹುದೊಡ್ಡದು ಇದೆ. ಡ್ಯಾಂ, ಕೈಗಾರಿಕೆ, ಶಿಕ್ಷಣ ಸಂಸ್ಥೆ, ರೈಲು, ವಿಮಾನ ಎಲ್ಲವೂ ಕಾಂಗ್ರೆಸ್ ಕೊಡುಗೆ ಆಗಿದೆ. ಆದರೆ, ಬಿಜೆಪಿ ಆಡಳಿತದಲ್ಲಿ ಒಂದು ಕೆಲಸ ಮಾಡದೆ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ ಎಂದರು.

Advertisement
Advertisement

ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಬಿಸಿಯೂಟ, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್, ಈಗಿನ ಪಂಚ ಗ್ಯಾರಂಟಿಗಳು ಸಾಮಾನ್ಯ ಜನರ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡೆಸುತ್ತಿವೆ. ಜನರು ಕೂಡ ಎಲ್ಲೆಡೆಯೂ ಕಾಂಗ್ರೆಸ್ ಆಡಳಿತಕ್ಕೆ ಮೆಚ್ಚುಗೆ ನೀಡುತ್ತಿರುವುದು ಬಿಜೆಪಿಯವರಲ್ಲಿ ನಡುಕು ಉಂಟು ಮಾಡಿದೆ ಎಂದು ಹೇಳಿದರು.

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ರೀತಿ ನಿರೀಕ್ಷೆ ಮೀರಿ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ. ಎಲ್ಲೆಡೆಯೂ ಜನರು ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡುತ್ತಿದ್ದು, ಅವುಗಳು ಮತಗಳಾಗಿ ಪರಿವರ್ತನೆಗೊಳ್ಳಲಿವೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಸಜ್ಜನ ರಾಜಕಾರಣಿ. ಏ.11, 12ರಂದು ತಾಲೂಕಿನ ವಿವಿಧ ಹಳ್ಳಿಗಳಲ್ಲಿ ರೋಡ್ ಶೋ ಹಾಗೂ ಗ್ರಾಪಂ ಕೇಂದ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಜನರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಸಿದ್ದರಾಮಯ್ಯ ಆಡಳಿತವನ್ನು ದೇಶದ ವಿವಿಧ ರಾಜ್ಯಗಳ ಸರ್ಕಾರಗಳು ಅಳವಡಿಸಿಕೊಳ್ಳುತ್ತವೆ. ಜತೆಗೆ ಬಹಳಷ್ಟು ಟೀಕೆ ಮಾಡಿದ ಬಿಜೆಪಿಯೇ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದ 25 ಮಂದಿ ಎಲ್ಲರೂ ಒಗ್ಗಟ್ಟಾಗಿದ್ದು, ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲ್ಲಬೇಕಿದೆ. ಡಿ.ಸುಧಾಕರ್, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಪಾವಗಡದ ವೆಂಕಟೇಶ್, ಶಿರಾದ ಟಿ.ಬಿ.ಜಯಚಂದ್ರ ಈಗಾಗಲೇ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತ ಕೊಡಿಸಲು ಹಗಲು-ರಾತ್ರಿ ಕಾರ್ಯಕರ್ತರ ಪಡೆ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಇದರಿಂದ ಭೀತಿಗೆ ಒಳಗಾಗಿರುವ ಬಿಜೆಪಿಗರು ಚುನಾವಣೆಗೆ ಮುನ್ನವೇ ಸೋಲು ಒಪ್ಪಿಕೊಂಡಿದ್ದಾರೆ ಎಂದರು.

ತೇಕಲವಟ್ಟಿ, ಎಚ್.ಡಿ.ಪುರ, ಚಿತ್ರಹಳ್ಳಿ, ನುಲೇನೂರು, ಶಿವಗಂಗ, ಮದ್ದೇರು, ತಾಳ್ಯ, ಗುಂಡೇರಿ, ವಿಶ್ವನಾಥನಹಳ್ಳಿ, ತಾಳಿಕಟ್ಟೆ, ರಾಮಗಿರಿ ಸೇರಿ ವಿವಿಧೆಡೆ  ಕಾರ್ಯಕರ್ತರ ಸಭೆ ನಡೆಸಿದರು.

ಜಿಪಂ ಮಾಜಿ ಅಧ್ಯಕ್ಷ ಶಿವಕುಮಾರ್, ಮಾಜಿ ಸದಸ್ಯರಾದ ಗಂಗಾಧರ, ಡಿ.ಕೆ.ಶಿವಮೂರ್ತಿ, ಇಂದಿರಾ ಕಿರಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಹನುಮಂತಪ್ಪ ಇತರರು ಭಾಗವಹಿಸಿದ್ದರು.

Advertisement
Tags :
Advertisement