ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ : ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಪ್ರತಿಭಟನೆ
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 17 : ಅಹಿಂದಾ ನಾಯಕ, ಬಡವರ ಬಂಧು, ಅನ್ನದಾತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಒನಕೆ ಓಬವ್ವ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಬಿಜೆಪಿ ಜೆಡಿಎಸ್. ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು.
ಪ್ರಜಾಪ್ರಭತ್ವವನ್ನು ಕಗ್ಗೊಲೆ ಮಾಡುತ್ತಿರುವ ರಾಜ್ಯಪಾಲರ ವಿರುದ್ದ ಗೋಬ್ಯಾಕ್ ಧಿಕ್ಕಾರಗಳನ್ನು ಕೂಗಿದ ಪ್ರತಿಭಟನಾಕಾರರು ಪ್ರಧಾನಿ ಮೋದಿ ಹಾಗೂ ಅಮಿತ್‍ಶಾ ವಿರುದ್ದ ಕಿಡಿಕಾರಿದರು.
ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ. ರಾಜ್ಯವನ್ನು ಹಸಿವು ಮಕ್ತವನ್ನಾಗಿ ಮಾಡಲು ಹೊರಟಿರುವುದು ಕೇಂದ್ರ ಬಿಜೆಪಿ.ಗೆ ಸಹಿಸಲು ಆಗುತ್ತಿಲ್ಲ. ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾನಿರತರು ಎಚ್ಚರಿಸಿದರು.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್, ಜಿಲ್ಲಾಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ನಗರಸಭೆ ಮಾಜಿ ಸದಸ್ಯ ಹೆಚ್.ಮಂಜಪ್ಪ, ಡಿ.ಎನ್.ಮೈಲಾರಪ್ಪ, ಸಂಪತ್, ಎನ್.ಡಿ.ಕುಮಾರ್, ಎಸ್.ಎನ್.ರವಿಕುಮಾರ್, ಸೈಯದ್ ಖುದ್ದೂಸ್, ಮಾಳೇಶ್, ರಾಜಣ್ಣ, ಪ್ರಕಾಶ್‍ರಾಮನಾಯ್ಕ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.