ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ : ಜಯ ಕರ್ನಾಟಕ ಜನಪರ ವೇದಿಕೆ ಒತ್ತಾಯ
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 19 : ರಾಜ್ಯ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಕೂಡಲೆ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಬುಧವಾರ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಪೆಟ್ರೋಲ್ ಲೀಟರ್‍ಗೆ ಮೂರು ರೂ. ಡೀಸೆಲ್ ಲೀಟರ್‍ಗೆ ಮೂರು ರೂ. ಐವತ್ತು ಪೈಸೆಗಳನ್ನು ಏರಿಸಿ ಬಡವರು, ರೈತರು, ಜನಸಾಮಾನ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತೊಂದರೆ ಕೊಡುತ್ತಿದೆ. ಬೆಲೆ ಏರಿಕೆಯಿಂದ ಬಸ್ ಪ್ರಯಾಣ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯವಾಗಿ ಏರಿಕೆಯಾಗುತ್ತದೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೆ ದರ ಏರಿಕೆಯನ್ನು ಇಳಿಸಬೇಕೆಂದು ಮನವಿ ಮಾಡಿದರು.
ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಬಿ.ಟಿ.ರಾಜೇಂದ್ರ, ಉಪಾಧ್ಯಕ್ಷ ಸಿದ್ದೇಶ್ವರ, ಪ್ರಧಾನ ಕಾರ್ಯದರ್ಶಿ ಸಿ.ಅಭಿಲಾಷ್, ತಾಲ್ಲೂಕು ಅಧ್ಯಕ್ಷ ಬಿ.ಅಶೋಕ್, ಕಾರ್ಯದರ್ಶಿ ಡಿ.ಗಿರೀಶ್, ಕಾರ್ಯಾಧ್ಯಕ್ಷ ನಿರಂಜನ್ ವಿ. ಸತೀಶ್, ರೋಹನ್, ಸ್ವಾಮಿ, ಪ್ರಿಯದರ್ಶನ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.