Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ : ಜಯ ಕರ್ನಾಟಕ ಜನಪರ ವೇದಿಕೆ ಒತ್ತಾಯ

02:26 PM Jun 19, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 19 : ರಾಜ್ಯ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಕೂಡಲೆ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಬುಧವಾರ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Advertisement

ಪೆಟ್ರೋಲ್ ಲೀಟರ್‍ಗೆ ಮೂರು ರೂ. ಡೀಸೆಲ್ ಲೀಟರ್‍ಗೆ ಮೂರು ರೂ. ಐವತ್ತು ಪೈಸೆಗಳನ್ನು ಏರಿಸಿ ಬಡವರು, ರೈತರು, ಜನಸಾಮಾನ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತೊಂದರೆ ಕೊಡುತ್ತಿದೆ. ಬೆಲೆ ಏರಿಕೆಯಿಂದ ಬಸ್ ಪ್ರಯಾಣ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯವಾಗಿ ಏರಿಕೆಯಾಗುತ್ತದೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೆ ದರ ಏರಿಕೆಯನ್ನು ಇಳಿಸಬೇಕೆಂದು ಮನವಿ ಮಾಡಿದರು.

ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಬಿ.ಟಿ.ರಾಜೇಂದ್ರ, ಉಪಾಧ್ಯಕ್ಷ ಸಿದ್ದೇಶ್ವರ, ಪ್ರಧಾನ ಕಾರ್ಯದರ್ಶಿ ಸಿ.ಅಭಿಲಾಷ್, ತಾಲ್ಲೂಕು ಅಧ್ಯಕ್ಷ ಬಿ.ಅಶೋಕ್, ಕಾರ್ಯದರ್ಶಿ ಡಿ.ಗಿರೀಶ್, ಕಾರ್ಯಾಧ್ಯಕ್ಷ ನಿರಂಜನ್ ವಿ. ಸತೀಶ್, ರೋಹನ್, ಸ್ವಾಮಿ, ಪ್ರಿಯದರ್ಶನ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Advertisement
Tags :
bengaluruchitradurgaJaya Karnataka People's ForumPetrol-diesel price hikereduce pricessuddionesuddione newsಚಿತ್ರದುರ್ಗಜಯ ಕರ್ನಾಟಕ ಜನಪರ ವೇದಿಕೆಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹಿಂಪಡೆಯಿರಿ
Advertisement
Next Article