Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಗಿಡಗಳನ್ನು ನೆಟ್ಟು ಪೋಷಿಸುವುದು ಕೇವಲ ಅರಣ್ಯ ಇಲಾಖೆ ಕೆಲಸವಲ್ಲ, ಇದು ಪ್ರತಿಯೊಬ್ಬರ ಜವಾಬ್ದಾರಿ : ರಾಜಣ್ಣ

05:11 PM Jun 22, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಜೂನ್. 22 : ಗಿಡ-ಮರ ಅರಣ್ಯಗಳು ನಾಶವಾಗುತ್ತಿದ್ದು,ತಾಪಮಾನ ಹೆಚ್ಚುತ್ತಿರುವುದರಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಬೇಕೆಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ ಹೇಳಿದರು.

Advertisement

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿ.ಶಿವಣ್ಣ ಫೌಂಡೇಶನ್ ಟ್ರಸ್ಟ್ ಬೆಂಗಳೂರು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯಲ್ಲಿ ಐವತ್ತು ಸಾವಿರ ಗಿಡ ನೆಡುವ ಕಾರ್ಯಕ್ರಮವನ್ನು ಚಂದ್ರವಳ್ಳಿಯಲ್ಲಿ ಉದ್ಗಾಟಿಸಿ ಮಾತನಾಡಿದರು.

ಬೇರೆ ಬೇರೆ ಕಾರಣಗಳಿಂದಾಗಿ ಗಿಡ-ಮರ, ಅರಣ್ಯ ನಾಶವಾಗುತ್ತಿದೆ. ಗಿಡಗಳನ್ನು ನೆಟ್ಟು ಪೋಷಿಸುವುದು ಕೇವಲ ಅರಣ್ಯ ಇಲಾಖೆ ಕೆಲಸವೆಂದು ಭಾವಿಸುವುದು ತಪ್ಪು. ಪ್ರತಿಯೊಬ್ಬರ ಮೇಲೆ ಜವಾಬ್ದಾರಿಯಿದೆ. ಜಿಲ್ಲೆಯಲ್ಲಿ 84 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಮಳೆಗಾಲದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸಿದಾಗ ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಕೊಡುಗೆಯಾಗಿ ನೀಡಬಹುದು.

ಅತ್ಯಧಿಕ ಬಿಸಿಲಿನ ತಾಪಮಾನವೂ ಕೂಡ ಪರಿಸರ ನಾಶಕ್ಕೆ ಕಾರಣವಾಗುತ್ತದೆ. ಗಾಳಿ, ನೀರು, ಆಹಾರ ಎಲ್ಲವೂ ಕಲುಷಿತವಾಗುತ್ತಿದೆ. ಸರ್ಕಾರದಿಂದ ಕಳೆದ ವರ್ಷ 7.50 ಲಕ್ಷ ಸಸಿ ಬೆಳೆಸಿದ್ದೇವೆ. ಈ ವರ್ಷ 17 ಲಕ್ಷ ಸಸಿಗಳನ್ನು ಜಿಲ್ಲೆಯಲ್ಲಿ ಬೆಳೆಸುತ್ತಿದ್ದೇವೆಂದು ತಿಳಿಸಿದರು.

ಬಿ.ಸಿ.ಶಿವಣ್ಣ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷೆ ಡಾ.ಬಿ.ಎಸ್.ತ್ರಿವೇಣಿ ಮಾತನಾಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಐವತ್ತು ಸಾವಿರ ಗಿಡಗಳನ್ನು ನೆಟ್ಟು ಪರಿಸರ ಉಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಚಂದ್ರವಳ್ಳಿಯಿಂದ ಗಿಡ ನೆಡುವ ಕಾರ್ಯಕ್ರಮ ಕೈಗೆತ್ತಿಕೊಂಡಿದ್ದೇವೆ. ಗಿಡ-ಮರಗಳು ನಾಶವಾಗುತ್ತಿರುವುದರಿಂದ ಪರಿಸರದಲ್ಲಿ ಏರುಪೇರಾಗಿ ಸಕಲ ಜೀವರಾಶಿಗಳು ತತ್ತರಿಸುವಂತಾಗಿದೆ. ಹಾಗಾಗಿ ಪ್ರತಿಯೊಬ್ಬರು ಒಂದೊಂದು ಗಿಡ-ನೆಟ್ಟು ಪೋಷಿಸಬೇಕು ಎಂದು ಹೇಳಿದರು.

ನಗರಸಭೆ ಪೌರಾಯುಕ್ತೆ ರೇಣುಕ ಮಾತನಾಡುತ್ತ ಗಿಡಗಳನ್ನು ನೆಡುವುದು ಎಷ್ಟು ಮುಖ್ಯವೋ ಜೋಪಾನ ಮಾಡುವುದು ಅಷ್ಠೆ ಮುಖ್ಯ. ಚಿಕ್ಕ ಮಕ್ಕಳಿಂದ ಗಿಡಗಳನ್ನು ಹಾಕಿಸಬೇಕು. ಮುಂದೆ ಅದು ಬೆಳೆದು ದೊಡ್ಡ ಮರವಾದಾಗ ಅವರಿಗೆ ಖುಷಿ ಕೊಡುವುದರ ಜೊತೆಗೆ ನಾನು ನೆಟ್ಟ ಗಿಡ ದೊಡ್ಡದಾಗಿದೆ ಎಂದು ಮತ್ತೊಬ್ಬರಿಗೆ ತೋರಿಸಬಹುದು. ಪರಿಸರದಲ್ಲಿ ಹಸಿರು ನೋಡಿದರೆ ಕಣ್ಣಿಗೆ ಮನಸ್ಸಿಗೆ ತಂಪಾಗಿಸುತ್ತದೆ. ನಗರಸಭೆ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಖಾಲಿ ಜಾಗವಿದೆಯೋ ಅಲ್ಲೆಲ್ಲಾ ಗಿಡಗಳನ್ನು ನೆಡಿ ನನ್ನ ಸಂಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದರು.

ಇಂಜಿನಿಯರ್ ಪಿ.ಎಲ್.ಸುರೇಶ್‍ರಾಜು ಮಾತನಾಡಿ ಬಳಸುವವರನ್ನು ಮರೆಯುವುದು ಸಹಜ. ಆದರೆ ಬೆಳೆಸುವವರನ್ನು ಯಾರು ಮರೆಯುವುದಿಲ್ಲ. ಮಕ್ಕಳಿಂದ ಬೀಜದ ಉಂಡೆಗಳನ್ನು ತಯಾರಿಸಿ ಎಲ್ಲಾ ಕಡೆ ಪಸರಿಸುವ ಕೆಲಸವಾಗಬೇಕು. ಮಕ್ಕಳು ಚಿಕ್ಕಂದಿನಲ್ಲಿಯೇ ಗಿಡ ನೆಟ್ಟು ಮುಂದಿನ ಪೀಳಿಗೆಗೆ ಹಸಿರು ಪರಿಸರ ನೀಡುವಂತಾಗಲಿ ಎಂದು ಹಾರೈಸಿದರು.

ನ್ಯಾಯವಾದಿ ಕೆ.ಎಸ್.ವಿಜಯ ಮಾತನಾಡುತ್ತ ಸಾಲು ಮರದ ತಿಮ್ಮಕ್ಕ ಯಾವುದೇ ಪ್ರಶಸ್ತಿಯ ಆಸೆಗಾಗಿ ಗಿಡ-ಮರಗಳನ್ನು ಬೆಳೆಸಲಿಲ್ಲ. ಬಿ.ಸಿ.ಶಿವಣ್ಣನವರು ಆದರ್ಶ ವ್ಯಕ್ತಿಯಾಗಿ ಬದುಕಿದವರು. ಅವರ ಆಸೆಯಂತೆ ಗಿಡ ನೆಟ್ಟು ದೊಡ್ಡ ಮರವನ್ನಾಗಿ ಬೆಳೆಸಬೇಕಿದೆ. ಬುದ್ದ, ಬಸವ, ಅಂಬೇಡ್ಕರ್ ಆದರ್ಶ ತತ್ವಗಳು ಹಾಗೂ ಪರಿಸರದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕೆಂದರು.

ಬಿ.ಶಿವಣ್ಣ ಫೌಂಡೇಶನ್ ಟ್ರಸ್ಟ್‌ನ ಬಿ.ಎಸ್.ಹೇಮಲತ, ನ್ಯಾಯವಾದಿ ಬಿ.ಎಸ್.ನಾಗರಾಜು, ಟಿ.ಪಾಂಡ್ಯಪ್ಪ, ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್‍ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥ್‍ಗೊಪ್ಪೆ ವೇದಿಕೆಯಲ್ಲಿದ್ದರು.

ಹತ್ತನೆ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿರಿಯೂರಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Advertisement
Tags :
bengaluruchitradurgaforest departmentPlanting and nurturing treesRajannasuddionesuddione newsಅರಣ್ಯ ಇಲಾಖೆಗಿಡಚಿತ್ರದುರ್ಗಬೆಂಗಳೂರುರಾಜಣ್ಣಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article