For the best experience, open
https://m.suddione.com
on your mobile browser.
Advertisement

ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ : ಡಾ.ಡಿ.ಎಂ.ಅಭಿನವ್

03:27 PM Sep 06, 2024 IST | suddionenews
ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ   ಡಾ ಡಿ ಎಂ ಅಭಿನವ್
Advertisement

Advertisement
Advertisement

ಚಿತ್ರದುರ್ಗ. ಸೆ. 06: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ ಕಂಡುಬರುವ ಖಾಯಿಲೆಗಳಿಗೆ ಆರೋಗ್ಯ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ರಮವಹಿಸುವುದರ ಜೊತೆಗೆ ಒಳ್ಳೆಯ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಬೇಕು ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು.

ನಗರದ ದರ್ಜಿ ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಈ ಪೋಷಣ್ ಮಾಸಾಚರಣೆಯ ಗುರಿ- ಉದ್ದೇಶಗಳು ಪ್ರಮುಖವಾಗಿ ತಳಮಟ್ಟದಲ್ಲಿ ಬೇರೂರಬೇಕು. ಎಲ್ಲಾ ಗರ್ಭಿಣಿಯರು, ಬಾಣಂತಿಯರು, ಮಕ್ಕಳ ಆರೋಗ್ಯ ಸುಧಾರಕ ಅಂಶಗಳ ಮೇಲೆ ಬೆಳಕು ಚೆಲ್ಲಬೇಕು ಎಂದು ಹೇಳಿದರು.

Advertisement

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ವಿ.ವೀಣಾ ಮಾತನಾಡಿ, ಮಹಿಳೆಯರಿಗೆ, ಮಕ್ಕಳಿಗೆ, ಗರ್ಭಿಣಿಯರಿಗೆ, ಹದಿಹರೆಯದವರಿಗೆ ಕಬ್ಬಿಣಾಂಶದ ಅವಶ್ಯಕತೆ, ನಾರಿನ ಅಂಶದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕರಕಪ್ಪ ಮೇಟಿ ಮಾತನಾಡಿ, ಪೋಷಣ್ ಅಭಿಯಾನ ಕಾರ್ಯಕ್ರಮ 2018ರ ಮಾರ್ಚ್ 8ರಂದು ಪ್ರಧಾನಮಂತ್ರಿಗಳು ರಾಜಸ್ಥಾನದಲ್ಲಿ ಆರಂಭಿಸಿದರು. ಇದರಲ್ಲಿ 0-6 ವರ್ಷದ ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಮಹಿಳೆಯರು, ಹದಿಹರೆಯದವರು ಅಪೌಷ್ಠಿಕತೆ, ರಕ್ತಹೀನತೆ, ಕಡಿಮೆ ಹುಟ್ಟುತೂಕ, ಅನೀಮಿಯಾ ಬಗ್ಗೆ ಸವಿವರವಾಗಿ ತಿಳಿಸಿದರು. ಅದರಂತೆ ಪ್ರಮುಖವಾದ 11 ಜೀವಸತ್ವಗಳು ಮತ್ತು ಅವುಗಳ ಕೊರತೆಯಿಂದ ಬರುವ ರೋಗಗಳು ಹಾಗೂ ನಿಯಂತ್ರಣಾ ಕ್ರಮಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾರುತಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಯಶಸ್, ಆರೋಗ್ಯ ನಿರೀಕ್ಷಣಾಧಿಕಾರಿ ನಂದಿಶ್, ಅಂಗನವಾಡಿ ಮೇಲ್ವಿಚಾರಕಿ ಹೆಚ್.ಎಸ್.ಮಂಜುಳಾ, ಆರೋಗ್ಯ ಇಲಾಖೆಯ ಕಿ.ಮ.ಆ.ಸ ರವರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಗರ್ಭಿಣಿಯರು, ಬಾಣಂತಿಯರು, ಮಕ್ಕಳು, ಹದಿಹರೆಯದವರು ಇದ್ದರು.

Tags :
Advertisement