For the best experience, open
https://m.suddione.com
on your mobile browser.
Advertisement

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

05:42 PM May 18, 2024 IST | suddionenews
ಪ್ರಜ್ವಲ್ ವಿಡಿಯೋ ಕೇಸ್   ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ  ಮಂಜುನಾಥ್
Advertisement

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ. ಜರ್ಮನಿಯಿಂದ ಲಂಡನ್ ಗೆ ಪ್ಎಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದೇ ಕೇಸಿನಲ್ಲಿ ಮಹಿಳೆಯ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ರೇವಣ್ಣ ಅವರು ಕಾರಾಗೃಹಕ್ಕೂ ಹೋಗಿ, ಜಾಮೀನ ಮೇಲೆ ಬಿಡುಗಡೆಯಾಗಿದ್ದಾರೆ.

Advertisement

ಇದೇ ಮೊದಲ ಬಾರಿಗೆ ಡಾ.ಮಂಜುನಾಥ್ ಅವರು ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿಕೆ ಸುರೇಶ್ ಎದುರು ಸ್ಪರ್ಧೆ‌ ನಡೆಸಿದ್ದಾರೆ. ಇಂದು ರಾಮನಗರಕ್ಕೆ ಭೇಟಿ ಕೊಟ್ಟಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಅಶ್ಲೀಲ ವಿಡಿಯೋ ಘಟನೆ ಬಗ್ಗೆ ಮಾತನಾಡಿ, ನಾವೂ ಸಮಾಜದ ಆರೋಗ್ಯನ್ನು ಕಾಪಾಡಿಕೊಳ್ಳಬೇಕು. ಬರೀ ದೇಹದ ಆರೋಗ್ಯ ಕಾಪಾಡಿಕೊಂಡರೆ ಸಾಲದು. ಇದು ಪ್ರತಿಯೊಬ್ಬ ಪ್ರಜೆ, ಜನಪ್ರತಿನಿಧಿಯ ಜವಬ್ದಾರಿಯಾಗಿದೆ. ನಾವೆಲ್ಲರೂ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು ಎಂದಿದ್ದಾರೆ.

Advertisement

ಇದೇ ವೇಳೆ ಗೆಲುವಿನ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದಲ್ಲಿ ನಮಗೆ ಉತ್ತಮ ಬೆಂಬಲ ಸಿಕ್ಕಿದೆ. ನಿಮಗೆ ಮತ ನೀಡಿದ್ದೇವೆ, ನೀವೆ ಗೆಲ್ಲಬೇಕು ಎಂದು ಹೇಳಿದ್ದಾರೆ. ಹೀಗಾಗಿ ನಮಗೆ ಗೆಲುವು ಸಿಗಲಿದೆ. ಮೂರನೇ ಬಾರಿಗೆ ಮೋದಿಯವರು ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಡಿಕೆ ಸುರೇಶ್ ಅವರನ್ನು ಸೋಲಿಸುವ ಭರವಸೆ ನೀಡಿದ್ದಾರೆ.

Advertisement

Advertisement
Advertisement
Tags :
Advertisement