ಜುಲೈ 28 ರಂದು ಪ್ರತಿಭಾ ಪುರಸ್ಕಾರ ಮತ್ತು ಶಿಷ್ಯ ವೇತನ ವಿತರಣಾ ಸಮಾರಂಭ
ಸುದ್ದಿಒನ್, ಚಿತ್ರದುರ್ಗ, ಜುಲೈ.25 : ಜಿಲ್ಲಾ ಬೇಡಜಂಗಮ ಸಮಾಜ ಸಂಸ್ಥೆ ಮತ್ತು ತಾಲ್ಲೂಕು ಬೇಡ ಜಂಗಮ ಸಮಾಜಗಳು ಚಿತ್ರದುರ್ಗ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ಜಿಲ್ಲಾ ಪ್ರತಿಭಾ ಪುರಸ್ಕಾರ ಮತ್ತು ಶಿಷ್ಯ ವೇತನ ವಿತರಣಾ ಸಮಾರಂಭವನ್ನು ಜುಲೈ 28ರಂದು ಬೆಳಿಗ್ಗೆ 10-30ಕ್ಕೆ ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
ಹೆಬ್ಬಾಳು ವಿರಕ್ತಮಠದ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ಬೇಡಜಂಗಮ ಸಮಾಜದ ಜಿಲ್ಲಾದ್ಯಕ್ಷ ಸೋಮಶೇಖರ ಮಂಡಿಮಠ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ತಿನ ಸದಸ್ಯ ಕೆ.ಎಸ್.ನವೀನ್ ಉದ್ಘಾಟಿಸುವರು. ನಿವೃತ್ತ ಪ್ರಾಚಾರ್ಯ ಹಾಗೂ ಬೇಡಜಂಗಮ ಸಮಾಜ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಷಡಾಕ್ಷರಯ್ಯ ಪ್ರಾಸ್ತಾವಿಕ ನುಡಿಯುವರು. ವಿಧಾನಸಭಾ ಸದಸ್ಯ ಕೆ.ಸಿ.ವೀರೇಂದ್ರ (ಪಪ್ಪಿ), ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ಜಿ.ಹೆಚ್.ತಿಪ್ಪಾರೆಡ್ಡಿ, ಜಿಲ್ಲಾ ಬೇಡಜಂಗಮ ಸಮಾಜದ ಕಾರ್ಯಾಧ್ಯಕ್ಷ ಎಂ.ಟಿ.ಮಲ್ಲಿಕಾರ್ಜುನಸ್ವಾಮಿ, ಮಾಜಿ ಶಾಸಕ ಹಾಗೂ ಕುಂಚಿಟಿಗ ವೀರಶೈವ ಸಮಾಜದ ಅಧ್ಯಕ್ಷ ಎಂ.ಬಿ.ತಿಪ್ಪೇರುದ್ರಪ್ಪ, ಅಖಿಲ ಭಾರತ ಬೇಡಜಂಗಮ ಸಮಾಜದ ಕಾರ್ಯಧ್ಯಕ್ಷ ಹಾಗೂ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ.ವೀರೇಶ್, ಖಜಾಂಚಿ ಕೆ.ಎಸ್.ಶಿವನಗೌಡ್ರು, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿಶಿವಮೂರ್ತಿ, ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎನ್.ತಿಪ್ಪೇಸ್ವಾಮಿ ಎಸ್‌ಎಂಎಲ್, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಜೆ.ಶಿವಪ್ರಕಾಶ್, ಶಿವಸಿಂಪಿ ಸಮಾಜದ ಜಿಲ್ಲಾಧ್ಯಕ್ಷ ಇ.ಎಸ್. ಜಯದೇವಮೂರ್ತಿ, ಹೇಮರೆಡ್ಡಿ ಮಲ್ಲಮ್ಮ ಸಮಾಜದ ಜಿಲ್ಲಾಧ್ಯಕ್ಷ ಜಿ.ಚಿದಾನಂದಪ್ಪ, ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಡಿ.ಎಸ್.ಸುರೇಶ್‌ಬಾಬು, ಸಾಧು ಸದ್ಧರ್ಮ ವೀರಶೈವ ಲಿಂಗಾಯತ ಸಮಾಜದ ಜಿಲ್ಲಾಧ್ಯಕ್ಷ ಎಂ.ಬಿ.ಚನ್ನಬಸವನಗೌಡ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಕೆ.ಸಿ.ಗಂಗಾಧರಪ್ಪ, ಕುಂಬಾರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಎಸ್.ರ‍್ರಿಸ್ವಾಮಿ, ವೀರಶೈವ ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಟೇಲ್ ಶಿವಕುಮಾರ್, ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯ್‌ಕುಮಾರ್, ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಕೆ.ಪ್ರಭುದೇವ್, ವೀರಶೈವ ಸಮಾಜದ ಖಜಾಂಚಿ ಕೆ.ಎಂ.ತಿಪ್ಪೇಸ್ವಾಮಿ, ಬೇಡಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ಜಿ.ಎಸ್.ಕಲ್ಲೇಶಯ್ಯ, ಹೊಸದುರ್ಗ ಜಂಗಮ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕಧ್ಯಕ್ಷ ಕೆ.ಎಸ್.ಕಲ್ಮಠ್, ಹೊಳಲ್ಕೆರೆ ಬೇಡಜಂಗಮ ಸಮಾಜದ ತಾಲ್ಲೂಕಧ್ಯಕ್ಷ ಹೆಚ್.ಪ್ರಭುಲಿಂಗಯ್ಯ, ಚಳ್ಳಕೆರೆ ಬೇಡಜಂಗಮ ಸಮಾಜದ ತಾಲ್ಲೂಕಧ್ಯಕ್ಷ ಎಂ.ಸಿ.ತಿಪ್ಪೇಸ್ವಾಮಿ, ಹಿರಿಯೂರು ಬೇಡ ಜಂಗಮ ಸಮಾಜದ ತಾಲ್ಲೂಕಧ್ಯಕ್ಷ ಸಿ.ಎಂ.ಸ್ವಾಮಿ, ಮೊಳಕಾಲ್ಮೂರು ಬೇಡಜಂಗಮ ಸಮಾಜದ ತಾಲ್ಲೂಕಧ್ಯಕ್ಷ ಟ.ಶಿವಣ್ಣ ಮುಂತಾದವರು ಮುಖ್ಯಅತಿಥಿಗಳಾಗಿ ಉಪಸ್ಥಿತರಿರುವರು ಎಂದು ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.