For the best experience, open
https://m.suddione.com
on your mobile browser.
Advertisement

ಮುರುಘಾ ಮಠದ ಪೀಠಾಧಿಪತಿಗೆ ಅಧಿಕಾರ ಹಸ್ತಾಂತರಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು

08:35 PM Dec 07, 2023 IST | suddionenews
ಮುರುಘಾ ಮಠದ ಪೀಠಾಧಿಪತಿಗೆ ಅಧಿಕಾರ ಹಸ್ತಾಂತರಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು
Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.07 : ಮುರುಘಾಮಠದ ಆಡಳಿತಕಾರಿಯಾಗಿದ್ದ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಇದೇ ಡಿಸೆಂಬರ್ 05 ನೇ ತಾರೀಖಿನಿಂದ ಅನ್ವಯವಾಗುವಂತೆ ಮುರುಘಾಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತವನ್ನು ಮುರುಘಾಮಠದ ಪೀಠಾಧಿಪತಿಗಳು ಮತ್ತು ಎಸ್.ಎಂ ವಿದ್ಯಾಪೀಠದ ಅಧ್ಯಕ್ಷರಿಗೆ ಹಸ್ತಾಂತರಿಸಿರುತ್ತಾರೆ ಎಂದು ಎಸ್.ಜೆ.ಎಂ ವಿದ್ಯಾಪೀಠದ ‌ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಪ್ರಕರಣದ ಹಿನ್ನೆಲೆ : ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರನ್ನು ಪೋಕ್ಸೊ ಪ್ರಕರಣದಲ್ಲಿ 2022ರ ಸೆಪ್ಟಂಬರ್ 1ರಂದು ಬಂಧಿಸಲಾಗಿತ್ತು. (ಪ್ರಸ್ತುತ ಅವರು ಜಾಮೀನು ಪಡೆದು ಹೊರಗಡೆ ಇದ್ದಾರೆ.) ಮಠದ ಆಡಳಿತ ದೃಷ್ಟಿಯಿಂದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

Advertisement

ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು, ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿ, 'ಮಠಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು' ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಸರ್ಕಾರದ ಆದೇಶವನ್ನು ರದ್ದುಪಡಿಸಿತ್ತು. ಮತ್ತು ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಮಠದ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಿತ್ತು.

ಪ್ರಸ್ತುತ ಮುರುಘಾಮಠದ ಆಡಳಿತಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು
ಮುರುಘಾಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತವನ್ನು ಮುರುಘಾಮಠದ ಪೀಠಾಧಿಪತಿಗಳು ಮತ್ತು ಎಸ್.ಎಂ ವಿದ್ಯಾಪೀಠದ ಅಧ್ಯಕ್ಷರಿಗೆ ಹಸ್ತಾಂತರಿಸಿರುತ್ತಾರೆ.

Tags :
Advertisement