For the best experience, open
https://m.suddione.com
on your mobile browser.
Advertisement

ಉತ್ತಮ ಆರೋಗ್ಯಕ್ಕಾಗಿ ಸ್ವಚ್ಛತೆಗೆ ಆಧ್ಯತೆ ನೀಡಿ : ಮಂಜುಳಾ ಶ್ರೀಕಾಂತ್

02:45 PM Sep 22, 2024 IST | suddionenews
ಉತ್ತಮ ಆರೋಗ್ಯಕ್ಕಾಗಿ ಸ್ವಚ್ಛತೆಗೆ ಆಧ್ಯತೆ ನೀಡಿ   ಮಂಜುಳಾ ಶ್ರೀಕಾಂತ್
Advertisement

ನಾಯಕನಹಟ್ಟಿ, ಸೆ.22 : ಉತ್ತಮ ಆರೋಗ್ಯಕ್ಕಾಗಿ ಸ್ವಚ್ಛತೆಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ.ಮಂಜುಳಾ ಶ್ರೀಕಾಂತ್ ಹೇಳಿದರು.

Advertisement
Advertisement

ಪಟ್ಟಣದ ಎ.ಕೆ.ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಭಾನುವಾರ ಭಾರತೀಯ ಸ್ಟೇಟ್ ಬ್ಯಾಂಕ್, ಜಿಲ್ಲಾ ಬ್ಯಾಂಕರುಗಳ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಅರಿವು ಕಾರ್ಯಕ್ರಮವದಲ್ಲಿ ಮಾತನಾಡಿದರು.

ಸಾರ್ವಜನಿಕರು ಕಸವನ್ನು ಬೀದಿಗೆ ಹಾಕದೆ, ತಮ್ಮ ಮನೆ, ಸುತ್ತಮುತ್ತಲಿನ ಪ್ರದೇಶದಲ್ಲಿ ಹಸಿ ಹಾಗೂ ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ಪಟ್ಟಣ ಪಂಚಾಯತಿಯ ಕಸ ವಿಲೇವಾರಿ ವಾಹನಕ್ಕೆ ಹಾಕಬೇಕು. ಇದರಿಂದ ಸಾಂಕ್ರಮಿಕ ರೋಗಗಳು ಹರಡದಂತೆ ತಡೆಗಟ್ಟಲು ಅನುಕೂಲವಾಗಲಿದೆ ಎಂದರು.

Advertisement

ಸ್ವಚ್ಛತೆ ಕೇವಲ ಒಂದು ದಿನ ಕೆಲಸವಲ್ಲ. ಇದೊಂದು ನಿರಂತರ ಪ್ರಕ್ರಿಯೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ, ಹೀಗಾಗಿ ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸ್ವಚ್ಛ ಹಾಗೂ ಸುಂದವನ್ನಾಗಿಸಲು ಆಯ್ದ ಸ್ಥಳಗಳಲ್ಲಿ ಕಸದ ಬುಟ್ಟಿಗಳನ್ನು ಇಡಲಾಗುವುದು ಎಂದರು.

Advertisement

ಪಟ್ಟಣ ಪಂಚಾಯತಿ ಸದಸ್ಯ ಜೆ.ಆರ್ ರವಿಕುಮಾರ್ ಮಾತನಾಡಿ, ಸ್ವಚ್ಛತಾ ಕಾರ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಿದಾಗ ಮಾತ್ರ ಸುಂದರವಾದ, ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ. ಪರಿಸರ ಸ್ವಚ್ಛತೆಯಿಂದ ಮನುಷ್ಯನ ಆರೋಗ್ಯ ಉತ್ತಮವಾಗುತ್ತದೆ. ಹಾಗಾಗಿ ಎಲ್ಲರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

ಚಿತ್ರದುರ್ಗ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕುಮಾರ್ ಬಾಬು ಮಾತನಾಡಿ, ಸ್ವಚ್ಛತೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಬಸ್ ನಿಲ್ದಾಣ, ರಸ್ತೆ ಬದಿಗಳಲ್ಲಿ, ನೀರಿನ ಮೂಲಗಳು, ತರಕಾರಿ ಮಾರುಕಟ್ಟೆ ಪ್ರದೇಶ, ಧಾರ್ಮಿಕ ಸ್ಥಳಗಳಲ್ಲಿ ಶ್ರಮದಾನ ಚಟುವಟಿಕೆಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಇದರಿಂದ ಸಾಂಕ್ರಾಮಿಕ ರೋಗದಿಂದ ದೂರವಿದ್ದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ನಾಯಕನಹಟ್ಟಿ ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಬಿ.ಅರುಣ್‍ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಎಸ್‍ಬಿಐ ವ್ಯವಸ್ಥಾಪಕರಾದ ಪಂಕಜ್‍ಕುಮಾರ್, ಮಹೇಶ್ವರಪ್ಪ, ಗ್ರಾಪಂ ಮಾಜಿ ಸದಸ್ಯ ಆರ್.ಶ್ರೀಕಾಂತ್, ಎಸ್ಡಿಎಂಸಿ ಅಧ್ಯಕ್ಷ ನಾಗರಾಜ್, ಶಿಕ್ಷಕ ಸದಾಶಿವಯ್ಯ, ಬ್ಯಾಂಕಿನ ಸಿಬ್ಬಂದಿ ಪ್ರಸಾದ್, ಮಂಜುನಾಥ್, ಚಂದ್ರಣ್ಣ ಮತ್ತಿತರರಿದ್ದರು.

Tags :
Advertisement