For the best experience, open
https://m.suddione.com
on your mobile browser.
Advertisement

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ :  ಹೆಲಿಕ್ಯಾಪ್ಟರ್ ತಪಾಸಣೆ ಮಾಡಿದ ಅಧಿಕಾರಿಗಳು

05:23 PM Apr 23, 2024 IST | suddionenews
ಚಿತ್ರದುರ್ಗಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ    ಹೆಲಿಕ್ಯಾಪ್ಟರ್ ತಪಾಸಣೆ ಮಾಡಿದ ಅಧಿಕಾರಿಗಳು
Advertisement

Advertisement
Advertisement

ಚಿತ್ರದುರ್ಗ. ಏ.23: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್‍ ಅನ್ನು  ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ  ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಮಂಗಳವಾರ ಪರಿಶೀಲನೆ ನಡೆಸಿದರು.

Advertisement

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಮಂಗಳವಾರ ಮಧ್ಯಾಹ್ನ 3.25ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಚಿತ್ರದುರ್ಗ ನಗರದ ಎಂ.ಕೆ.ಹಟ್ಟಿಯ ಎಸ್‍ಜೆಎಂ ಆಂಗ್ಲ ಮಾಧ್ಯಮ ಶಾಲಾ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಿದರು.

Advertisement
Advertisement

ಈ ವೇಳೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾಜು ಸೇರಿದಂತೆ ಎಫ್‍ಎಸ್‍ಟಿ ತಂಡದ ಅಧಿಕಾರಿಗಳು ಇದ್ದರು.

Advertisement
Tags :
Advertisement