Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವಿಧಾನಸೌಧದಲ್ಲಿ  ಪಾಕಿಸ್ತಾನ್ ಪರ ಘೋಷಣೆ |  ಚಿತ್ರದುರ್ಗದಲ್ಲಿ ಎಬಿವಿಪಿ ಖಂಡನೆ

03:02 PM Feb 28, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ. ಫೆಬ್ರವರಿ 28: ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ  ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಖಂಡನೀಯ, ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು  ಪಾಕಿಸ್ತಾನ ಜಿಂದಾಬಾದ್ ಎಂದು ಘೋಷÀಣೆ ಕೂಗುವ ಸಂದರ್ಭದಲ್ಲಿ ಅವರ ಪಕ್ಕದಲ್ಲಿ ಇರುವ ವ್ಯಕ್ತಿಗಳು ಸಹಿತ ತಡೆಯುವುದಕ್ಕೆ ಪ್ರಯತ್ನ ಮಾಡಲಿಲ್ಲ ಹಾಗೂ ಅಲ್ಲೇ ಇದ್ದ ನಾಸೀರ್ ಹುಸೇನ ಸಹಿತ ಇದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ,  ಪಾಕ್ ಪರ ಘೋಷಣೆ ಕುರಿತು ಪತ್ರಕರ್ತರು ಪ್ರತಿಕ್ರಿಯೆ ಕೇಳಿದಾಗ ನಾಸೀರ್ ಹುಸೇನ್ ನಿರಾಕರಿಸಿ, ಪ್ರಶ್ನೆ ಮಾಡಿದ ಮಾಧ್ಯಮ ಸಿಬ್ಬಂದಿ ಮೇಲೆಯೇ ದರ್ಪ ತೋರಿರುವುದು ನೋಡಿದರೆ ದೇಶದ್ರೋಹಿಗಳಿಗೆ ಬೆಂಬಲ ನೀಡಲು ಹೊರಟಿದ್ದಾರಾ ಎಂಬ ಪ್ರಶ್ನೆ ಮೂಡುತ್ತದೆ ಎಂದಿದ್ದಾರೆ.

Advertisement

ಕೆಲವು ದಿನಗಳ ಹಿಂದೆ ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು. ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ, ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಲ್ಲದೆ ಇರುವುದಕ್ಕೆ ಪದೇ ಪದೇ ಇಂತಹ ಘಟನೆಗಳು ನಡೆಯುತ್ತವೆ ಸರಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಒತ್ತಾಯಿಸುತ್ತದೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯ ಮೇಲೆ ದೇಶದ್ರೋಹದ ಅಪರಾಧದ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಮತ್ತು ಈ ಪ್ರಕರಣದ ಸೂಕ್ತ ತನಿಖೆ ನಡೆದು ತೀರ್ಪು ಪ್ರಕಟವಾಗುವ ತನಕ ರಾಜ್ಯ ಸಭೆಯ ಸದಸ್ಯರಾಗಿ ಪ್ರಮಾಣ ವಚನವನ್ನು ನೀಡಬಾರದು ಎಂದು ಅಗ್ರಹಿಸುತ್ತೇವೆ. ಸರ್ಕಾರ ಕೂಡಲೇ ತಪ್ಪಿತಸ್ಥ ರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ರಾಜ್ಯಾಧ್ಯಂತ ತೀವ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಗೋಪಿ.ಆರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಸುದರ್ಶನ್ ನಾಯ್ಕ, ಮಹಿಳಾ ಪ್ರಮುಖ್ ಲಕ್ಷ್ಮೀ, ಮಹಿಳಾ ಸಹ ಪ್ರಮುಖ್ ಚಂದನ್.ಎಸ್, ಚಿತ್ರಸ್ವಾಮಿ-ಜಾಲತಾಣ, ಕಾರ್ಯಕರ್ತರಾದ ದರ್ಶನ್, ಸುಮನ್, ಯುವರಾಜ್, ತಿಪ್ಪೇಶ್, ಸುದೀಪ್ ಇನ್ನು ಇತರರು ಹಾಜರಿದ್ದರು.

ವಿಧಾನಸೌಧದಲ್ಲೇ ರಾಜ್ಯಸಭೆ ಚುನಾವಣಾ ಫಲಿತಾಂಶದ ಸಂಭ್ರಮಾಚಾರಣೆ ವೇಳೆ ಕಿಡಿಗೇಡಿಯೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವುದು ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷ ಎನ್.ಇ. ನಾಗರಾಜು ತೀವ್ರವಾಗಿ ಖಂಡಿಸಿದ್ದಾರೆ.

ಪಾಕಿಸ್ತಾನ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ವಿಧಾನಸೌಧದಲ್ಲಿ ಕೂಗಿರುವ ನೀಚರನ್ನು ಉಗ್ರಶಿಕ್ಷೆಗೆ ಗುರಿಪಡಿಸಬೇಕು. ಇಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷ ಎನ್.ಇ. ನಾಗರಾಜು ತೀವ್ರವಾಗಿ ಖಂಡಿಸಿದ್ದಾರೆ.

ಎಸ್.ಸಿ./ಎಸ್,ಟಿ. ಬಾಲಕಿಯರ ವಸತಿ ನಿಲಯದಲ್ಲಿ ವಾರ್ಡ್ ಮತ್ತು ಅಡಿಗೆ ಸಿಬ್ಬಂದಿಯವರು ಸರಿಯಾದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದೂರನ್ನು ನೀಡಿದೆ.

ಚಿತ್ರದುರ್ಗ ನಗರದ ಪಾಲಿಟೆಕ್ನಿಕ್ ಕಾಲೇಜ್ ಪಕ್ಕದಲ್ಲಿರುವ ಎಸ್.ಸಿ./ಎಸ್,ಟಿ. ಬಾಲಕಿಯರ ವಸತಿ ನಿಲಯದಲ್ಲಿ ವಾರ್ಡ್ ಮತ್ತು ಅಡಿಗೆ ಸಿಬ್ಬಂದಿಯವರು ಸರಿಯಾದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿಲ್ಲ, ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳು ಸೇವಿಸುವಂತಹ ಆಹಾರದಲ್ಲಿ ಹುಳಗಳು ಕಂಡುಬಂದಿರುತ್ತದೆ. ಇದ್ದರಿಂದ ವಿದ್ಯಾರ್ಥಿಗಳು ಆನಾರೋಗ್ಯಕ್ಕೆ ತುತ್ತಾಗಿದ್ದು, ಹಾಸ್ಟೆಲ್ ಬಿಟ್ಟು ಮನೆಗೆ ಹೋಗುವಂತಹ ಪರಿಸ್ಥಿತಿ ನಿರ್ಮಾಣ ಗೊಂಡಿದೆ ಎಂದು ಸದರಿ ಹಾಸ್ಟೆಲ್‍ನ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿರುತ್ತಾರೆ. ಮತ್ತು ಈ ಹಾಸ್ಟೆಲ್‍ನಲ್ಲಿ ತುರ್ತು ಚಿಕಿತ್ಸೆ ಕಿಟ್ ಮತ್ತು ಗ್ರಂಥಾಲಯವು ಇರುವುದಿಲ್ಲ. ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳು ಮಾಡುವು ಊಟದಲ್ಲಿ ಅದೇಷÉ್ಟೂೀ ಬಾರಿ ಹೊಟ್ಟೆನೋವು ಬಂದಿರುತ್ತದೆ. ಆಗ ತುರ್ತಾಗಿ ಯಾವ ಔಷಧಿಗಳು ಕೂಡ ಸದರಿ ಹಾಸ್ಟೆಲ್‍ನಲ್ಲಿ ಸಿಗುವುದಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದ್ದು, ಇದನ್ನು ಕಂಡಂತಹ ಆಡಳಿತಾಧಿಕಾರಿಗಳು ಕಣ್ಮುಚ್ಚಿ ಕುಳಿತುಕೊಂಡಿರುತ್ತಾರೆ. ಆದ್ದರಿಂದ ಜಿಲ್ಲಾಧಿಕಾರಿಗಳಾದ ತಾವುಗಳು ಕಾನೂನು ರೀತಿಯಲ್ಲಿ ಸೂಕ್ತ ಕ್ರಮಕೈಗೊಂಡು ಸದರಿ ಹಾಸ್ಟೆಲ್‍ಗೆ ಭೇಟಿನೀಡಿ ಅಲ್ಲಿರುವಂತಹ ಸಮಸ್ಯೆಗಳನ್ನು ಪರಿಶೀಲಿಸಿ ಸರಿಪಡಿಸಬೇಕಾಗಿ ಮನವಿ ಮಾಡಿದೆ.

ಜಿಲ್ಲಾ ಸಂಚಾಲಕರಾದ ಸಿದ್ದೇಶ್ ಯಾದವ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
ABVPbengaluruchitradurgacondemneddeclarationpro-Pakistansuddionesuddione newsVidhansoudaಎಬಿವಿಪಿಖಂಡನೆಘೋಷಣೆಚಿತ್ರದುರ್ಗಪಾಕಿಸ್ತಾನ್ಬೆಂಗಳೂರುವಿಧಾನಸೌಧಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article