For the best experience, open
https://m.suddione.com
on your mobile browser.
Advertisement

ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ

06:34 PM Nov 07, 2024 IST | suddionenews
ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ
Advertisement

ದಾವಣಗೆರೆ ನ.7: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ರೈತರ ಆರ್ಥಿಕ ಅಭಿವೃದ್ದಿಗೋಸ್ಕರ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯಿಂದ ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‍ಗೆ ರೂ.2400/-ರ ಬೆಲೆಯಲ್ಲಿ ಖರೀದಿಸಲು ತೀರ್ಮಾನಿಸಲಾಗಿದೆ.

Advertisement

ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ. ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿಯನ್ನು ನೀಡಿ, ಪ್ರೊಟ್ಸ್  ತಂತ್ರಾಂಶದಲ್ಲಿ ನೊಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೊಂದಾಯಿಸಿಕೊಳ್ಳಬಹುದು. ನೊಂದಣೆ ಪ್ರಕ್ರಿಯೆಯು ನ.11 ರಿಂದ ಪ್ರಾರಂಭವಾಗುತ್ತಿದ್ದು, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ.

ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ಧಪಡಿಸಿರುವ ಪ್ರೋಟ್ಸ್ ತಂತ್ರಾಂಶದ ಮೂಲಕ  ಮಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆದ ಆಸಕ್ತ ರೈತರು, ತಮ್ಮ ಮೆಕ್ಕೆಜೋಳದ ಮಾದರಿಗಳನ್ನು ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ನೀಡಬಹುದು.

Advertisement

ಪ್ರತಿ ಒಬ್ಬ ರೈತರಿಂದ ಗರಿಷ್ಠ 500 ಕ್ವಿಂಟಾಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿಗೆ ಸಹಾಯಕ ವ್ಯವಸ್ಥಾಪಕರು (ಪ.ಸಂ)  ದಾ.ಸೂರಜ್, ಮೊ.ಸಂ: 9844346640, ಹೊನ್ನಾಳಿ, ಚನ್ನಗಿರಿ ಹಾಗೂ ನ್ಯಾಮತಿ ಸಹಾಯಕ ವ್ಯವಸ್ಥಾಪಕರು (ಎಫ್&ಎಫ್) ಹರೀಶ್ ಕರೇಗೌಡ ಮೊ.ಸಂ: 7399530405 ಸಂಪರ್ಕಿಸಲು ಶಿಕಾರಿಪುರದ ಪಶು ಆಹಾರ ಘಟಕದ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.

Advertisement
Tags :
Advertisement