Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ

08:50 PM Mar 16, 2024 IST | suddionenews
Advertisement

 

Advertisement

ಚಿತ್ರದುರ್ಗ.  ಮಾ.16:  ಪ್ರಸಕ್ತ ಸಾಲಿನ ಕನಿಷ್ಟ ಬೆಂಬಲ ಬೆಲೆ ಚಿತ್ರದುರ್ಗ ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿ ಸಭಾ ನಡವಳಿಯಂತೆ ಪ್ರತಿ ರೈತರಿಂದ ರಾಗಿ ಉತ್ಪಾದನೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಾಲ್‍ನಂತೆ  ಪ್ರತಿ ಕ್ವಿಂಟಾಲ್‍ಗೆ ರೂ.3846/- ರಂತೆ ಎಲ್ಲಾ ರೈತರಿಂದ ರಾಗಿ ಖರೀದಿಸಲಾಗುತ್ತದೆ.

ಹೊಸದುರ್ಗ ತಾಲ್ಲೂಕು ಎಪಿಎಂಸಿ ಪ್ರಾಂಗಣ–1, ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಎಪಿಎಂಸಿ ಪ್ರಾಂಗಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 2 ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

Advertisement

ರೈತರು ರಾಗಿ ನೊಂದಣಿ ಮಾಡಿಸಲು ಕೃಷಿ ಇಲಾಖೆಯಿಂದ ನೀಡಿರುವ “ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ವ್ಯವಸ್ಥೆ” ಫ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ನೊಂದಣಿ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
Agricultural farmerschitradurgaFarmersMinimum Support Price SchemePurchase of milletಕನಿಷ್ಠ ಬೆಂಬಲ ಬೆಲೆ ಯೋಜನೆಚಿತ್ರದುರ್ಗರಾಗಿ ಖರೀದಿರೈತರು
Advertisement
Next Article