Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬದುಕಿನಲ್ಲಿ ರಂಗಭೂಮಿ ಉತ್ತಮ ಮಾರ್ಗದರ್ಶನ ನೀಡುತ್ತದೆ : ಡಾ.ಬಸವಕುಮಾರ ಸ್ವಾಮೀಜಿ

08:20 PM Nov 22, 2024 IST | suddionenews
Advertisement

 

Advertisement

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22: ಜೀವನ ಒಂದು ನಾಟಕರಂಗ ನಾವುಗಳು ಅದರ ಪಾತ್ರಧಾರಿಗಳು. ಬದುಕಿನಲ್ಲಿ ನಾನಾ ಕಷ್ಟಸುಖಗಳು ಬರುತ್ತವೆ. ಅದಕ್ಕೆಲ್ಲಾ ಉತ್ತಮ ಮಾರ್ಗದರ್ಶನ ನೀಡುವುದು ರಂಗಭೂಮಿ ಮಾತ್ರ ಎಂದು ಎಸ್.ಜೆ.ಎಮ್. ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.

Advertisement

 

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪಿಳ್ಳೆಕೆರೇನಹಳ್ಳಿಯ ಬಾಪೂಜಿ ವಿದ್ಯಾಸಂಸ್ಥೆಯ ಆವರಣದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ, ಮಕ್ಕಳ ಕಲರವ ಮತ್ತು ಶಿವಸಂಚಾರ ನಾಟಕೋತ್ಸವ 2024 ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಮಾತನಾಡಿದರು.

 

ಬಸವಾದಿ ಶಿವಶರಣರ, ಧಾರ್ಮಿಕ, ಐತಿಹಾಸಿಕ ಮತ್ತು ಪೌರಾಣಿಕ ವಸ್ತುಗಳನ್ನು ಜನಸಾಮಾನ್ಯರಿಗೆ ತಲುಪುವಲ್ಲಿ ರಂಗಮಾಧ್ಯಮ ಸುಲಭವಾಗಿದೆ. ಜೊತೆಗೆ ಯಾವುದೇ ಪ್ರಚಾರ ಮಾಧ್ಯಮಗಳಿಲ್ಲದ ಸಂದರ್ಭದಲ್ಲಿಯೂ ಮುರುಘಾಮಠದ ಹಿರಿಯ ಜಗದ್ಗುರುಗಳಾದ ಜಯದೇವ ಶ್ರೀಗಳು ರಂಗಭೂಮಿ, ಸಂಗೀತ ಕಲಾವಿದರನ್ನು ಮತ್ತು ಆನೆ, ಕುದುರೆ ಮುಂತಾದ ಪ್ರಾಣಿಗಳ ಜೊತೆ ದೇಶಾದ್ಯಂತ ಸಂಚಾರ ಮಾಡುತ್ತಾ ಸಾಮಾಜಿಕ ಕಳಿಕಳಿಯ ಮಾಹಿತಿಗಳನ್ನು ರಂಗಭೂಮಿ ಮೂಲಕ ಪ್ರಸ್ತುತಪಡಿಸುವ ವಿಚಾರಗಳನ್ನು ಮೆಲುಕಿ ಹಾಕಿದರು.

 

ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಮ್. ವೀರೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರೀಮಠಗಳು ಸಾಹಿತ್ಯ ಮತ್ತು ಸಾಂಸ್ಕøತಿಕ ಚಟುವಟಿಕೆಗಳಿಗೆ ಪೂರ್ವಕಾಲದಿಂದಲೂ ಸಹಕಾರ ಪ್ರೋತ್ಸಾಹ ನೀಡುತ್ತಾ ಬಂದಿವೆ ಎಂದರು. ಬಾಪೂಜಿ ಶಿಕ್ಷಣ ಸಂಸ್ಥೆಯ ಹಿರಿಯ ಸಂಯೋಜಕ ಪ್ರೊ.ರುದ್ರಪ್ಪ, ಶಸಾಪ ಕಾರ್ಯದರ್ಶಿ ಹುರುಳಿ ಬಸವರಾಜ್, ನಿ.ಪ್ರಾಧ್ಯಾಪಕ ನಂದೀಶ್, ಹಾಸ್ಯಸಾಹಿತಿ ಪರಮೇಶ್ವರಪ್ಪ ಕುದರಿ, ಬಾಪೂಜಿ ಸಮೂಹ ಸಂಸ್ಥೆಯ ನಿರ್ದೇಶಕ ಕೆಎಮ್ ಚೇತನ್, ಶಸಾಪ ತಾಲ್ಲೂಕಧ್ಯಕ್ಷ ಷಡಾಕ್ಷರಯ್ಯ, ಸಿದ್ದಿವಿನಾಯಕ ದೇವಸ್ಥಾನದ ಅಧ್ಯಕ್ಷ ಶಿವಕುಮಾರ್, ರಂಗನಿರ್ದೇಶಕ ಕೆಪಿಎಮ್ ಗಣೇಶಯ್ಯ, ಕದಳಿ ವೇದಿಕೆ ಜಿಲ್ಲಾಧ್ಯಕ್ಷೆ ಪ್ರೊ.ಎಂ.ಆರ್. ಜಯಲಕ್ಷ್ಮಿ, ಪ್ರ.ಕಾರ್ಯದರ್ಶಿ ಶೋಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದು ಮಾತನಾಡಿದರು.

 

ಬಾಪೂಜಿ ಪಬ್ಲಿಕ್ ಶಾಲೆ ಮಕ್ಕಳು ಕನ್ನಡ ಗೀತೆಗಳಿಗೆ ನೃತ್ಯ ಪ್ರದರ್ಶನ ನೀಡಿದರು. ಗಾನಯೋಗಿ ಸಂಗೀತ ಪರಿಷತ್ತಿನ ಸಂಗೀತ ವಿದ್ವಾನ್ ತೋಟಪ್ಪ ಉತ್ತಂಗಿ ಮತ್ತು ಸಂಗಡಿಗರನ್ನು ಗೌರವಿಸಿ ಸನ್ಮಾನಿಸಲಾಯಿತು ಹಾಗೂ ಸಂಗೀತಗಾಯನವನ್ನು ಪ್ರಸ್ತುತಪಡಿಸಿದರು. ನಾಟಕಕಾರ ಟಿ.ಕೆ.ರಾಮರಾವ್ ಇವರ ಮೂಲ ಕಾದಂಬರಿಯನ್ನು ಗಣೇಶ ಅಮೀನಗಡ ನಾಟಕಕ್ಕೆ ರೂಪಾಂತರಿಸಿರುವ ಬಂಗಾರದ ಮನುಷ್ಯ ನಾಟಕವು ವೈ.ಡಿ.ಬದಾಮಿ ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರದ ಕಲಾವಿದರು ಅಭಿನಯಿಸಿದರು.

Advertisement
Tags :
bengaluruchitradurgaDr. Basavakumar SwamijikannadaKannadaNewssuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಡಾ. ಬಸವಕುಮಾರ ಸ್ವಾಮೀಜಿಬೆಂಗಳೂರುರಂಗಭೂಮಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article