For the best experience, open
https://m.suddione.com
on your mobile browser.
Advertisement

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಸೇರಿದಂತೆ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು : ಕರುನಾಡ ವಿಜಯಸೇನೆ ಕಾರ್ಯಕರ್ತರ ಒತ್ತಾಯ

04:12 PM Jun 21, 2024 IST | suddionenews
ರೇಣುಕಾ ಸ್ವಾಮಿ ಕೊಲೆ ಪ್ರಕರಣ   ನಟ ದರ್ಶನ್ ಸೇರಿದಂತೆ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು   ಕರುನಾಡ ವಿಜಯಸೇನೆ ಕಾರ್ಯಕರ್ತರ ಒತ್ತಾಯ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಜೂನ್. 21 :  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹದಿನೇಳು ಮಂದಿಯನ್ನು ಬಂಧಿಸಿರುವ ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುತ್ತಿದ್ದು, ನಟ ದರ್ಶನ್ ಸೇರಿದಂತೆ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

Advertisement

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೈವಾಡದಿಂದ ರೇಣುಕಾಸ್ವಾಮಿ ಕೊಲೆಯಾಗಿದ್ದು, ಈ ಪ್ರಕರಣದಲ್ಲಿ ಯಾರಿಗೂ ಜಾಮೀನು ಸಿಗಬಾರದು. ದರ್ಶನ್‍ರಿಂದ ಹಲವಾರು ಘಟನೆಗಳು ನಡೆಯುತ್ತಲೆ ಇವೆ. ದುಃಖತಪ್ತ ಕುಟುಂಬಕ್ಕೆ ನ್ಯಾಯ ಸಿಗಬೇಕಾದರೆ ಎಲ್ಲರಿಗೂ ಉಗ್ರ ಶಿಕ್ಷೆಯಾಗಬೇಕೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಆಗ್ರಹಿಸಿದರು.

Advertisement
Advertisement

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಅಣ್ಣಪ್ಪ, ನಿಸಾರ್ ಅಹಮದ್, ಮಧುಸೂದನ್, ತಿಪ್ಪೇಸ್ವಾಮಿ, ನಾಗರಾಜ್‍ಮುತ್ತು, ಅಖಿಲೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
Advertisement