Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಸೇರಿದಂತೆ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು : ಕರುನಾಡ ವಿಜಯಸೇನೆ ಕಾರ್ಯಕರ್ತರ ಒತ್ತಾಯ

04:12 PM Jun 21, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 21 :  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹದಿನೇಳು ಮಂದಿಯನ್ನು ಬಂಧಿಸಿರುವ ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುತ್ತಿದ್ದು, ನಟ ದರ್ಶನ್ ಸೇರಿದಂತೆ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

Advertisement

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೈವಾಡದಿಂದ ರೇಣುಕಾಸ್ವಾಮಿ ಕೊಲೆಯಾಗಿದ್ದು, ಈ ಪ್ರಕರಣದಲ್ಲಿ ಯಾರಿಗೂ ಜಾಮೀನು ಸಿಗಬಾರದು. ದರ್ಶನ್‍ರಿಂದ ಹಲವಾರು ಘಟನೆಗಳು ನಡೆಯುತ್ತಲೆ ಇವೆ. ದುಃಖತಪ್ತ ಕುಟುಂಬಕ್ಕೆ ನ್ಯಾಯ ಸಿಗಬೇಕಾದರೆ ಎಲ್ಲರಿಗೂ ಉಗ್ರ ಶಿಕ್ಷೆಯಾಗಬೇಕೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಆಗ್ರಹಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಅಣ್ಣಪ್ಪ, ನಿಸಾರ್ ಅಹಮದ್, ಮಧುಸೂದನ್, ತಿಪ್ಪೇಸ್ವಾಮಿ, ನಾಗರಾಜ್‍ಮುತ್ತು, ಅಖಿಲೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
Activistsactor DarshaneveryoneinsistedKarunada Vijaya SenapunishedRenuka Swamy murder caseseverelyಒತ್ತಾಯಕಠಿಣ ಶಿಕ್ಷೆಕರುನಾಡ ವಿಜಯಸೇನೆಕಾರ್ಯಕರ್ತರುನಟ ದರ್ಶನ್ರೇಣುಕಾ ಸ್ವಾಮಿ ಕೊಲೆ ಪ್ರಕರಣ
Advertisement
Next Article