Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ರೇಣುಕಾಸ್ವಾಮಿ ಪ್ರಕರಣ: ಯಾವುದೇ ಮುಲಾಜು, ಒತ್ತಡಕ್ಕೆ ಒಳಗಾಗದೇ ತನಿಖೆ : ಗೃಹ ಸಚಿವ ಡಾ.ಜಿ.ಪರಮೇಶ್ವರ

04:08 PM Jun 18, 2024 IST | suddionenews
Advertisement

ಚಿತ್ರದುರ್ಗ. ಜೂನ್18: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಯಾವುದೇ ಮುಲಾಜಿಲ್ಲದೇ, ಯಾವುದೇ ಒತ್ತಡಕ್ಕೆ ಒಳಗಾಗದೇ ತನಿಖೆ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

Advertisement

ನಗರದ ತುರುವನೂರು ರಸ್ತೆಯ ಮೃತ ರೇಣುಕಸ್ವಾಮಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ, ತಂದೆ-ತಾಯಿ ಹಾಗೂ  ಪತ್ನಿಗೆ ಸಾಂತ್ವಾನ ಹೇಳಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರೇಣುಕಾಸ್ವಾಮಿ ಪ್ರಕರಣ ಎಲ್ಲರಿಗೂ ಬಹಳ ನೋವಿನ ಸಂಗತಿ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸುಮಾರು 17 ಮಂದಿಯನ್ನು ಬಂಧಿಸಲಾಗಿದೆ. ಅವರನ್ನು ತನಿಖೆಗೆ ಒಳಪಡಿಸಿ, ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

Advertisement

ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಜೀವನ ಸಾಗಿಸಲು ರೇಣುಕಾಸ್ವಾಮಿ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಬೇಕು ಎಂಬುವುದು ಮೃತ ರೇಣುಕಾಸ್ವಾಮಿ ಕುಟುಂಬದವರ ಬೇಡಿಕೆಯಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ತೀರ್ಮಾನಗೊಳ್ಳಲಾಗುವುದು ಎಂದು ತಿಳಿಸಿದರು.

ಯಾವುದೇ ರೀತಿಯಲ್ಲಿ ತಪ್ಪುಗಳು ಆಗದಂತೆ ಪ್ರಕರಣದ ತನಿಖೆಯಾಗಬೇಕು. ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯ ಕೊಡಿಸುವ ಕೆಲಸ ಮಾಡಲಾಗುತ್ತದೆ. ಯಾರು ಕೂಡ ಈ ಪ್ರಕರಣದಲ್ಲಿ ರಾಜಕೀಯ ಮಾಡುವುದು ಸಲ್ಲದು. ಎಲ್ಲವನ್ನೂ ರಾಜಕೀಯ ದೃಷ್ಠಿಯಿಂದ ನೋಡಬಾರದು. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಿಬಿಐ ತನಿಖೆ ಅಗತ್ಯವಿಲ್ಲ: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಭಾಗಿಯಾಗಿರುವವರ ಕುರಿತು ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ. 24 ಗಂಟೆಯೊಳಗೆ ಎಲ್ಲರನ್ನೂ ಕೂಡ ಬಂಧನಕ್ಕೆ ಒಳಪಡಿಸಿ, ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ಇಲಾಖೆಯು ಯಾವುದೇ ಒತ್ತಡಕ್ಕೆ ಒಳಗಾಗದೇ ಬಹಳ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ಸೇರಿದಂತೆ ಮತ್ತಿತರರು ಇದ್ದರು.

Advertisement
Tags :
bengaluruchitradurgaHome Minister Dr. G. ParameshwaraInvestigation without pressureRenukaswamy caseRenukaswamy murder casesuddionesuddione newsಗೃಹ ಸಚಿವ ಡಾ.ಜಿ.ಪರಮೇಶ್ವರಚಿತ್ರದುರ್ಗತನಿಖೆಬೆಂಗಳೂರುರೇಣುಕಾಸ್ವಾಮಿ ಪ್ರಕರಣಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article