ಸಿದ್ದರಾಮಯ್ಯ ಅವರನ್ನು ಭೇಟಿಯಾದ ರೇಣುಕಾಸ್ವಾಮಿ ತಂದೆ-ತಾಯಿ : ಮಗಳ ಕೆಲಸಕ್ಕೆ ಮನವಿ
ಸುದ್ದಿಒನ್, ಬೆಂಗಳೂರು: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದ ಆರೋಪದ ಮೇಲೆ ದರ್ಶನ್ ಅಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದರು. ಈ ಪ್ರಕರಣ ಸಂಬಂಧ ಹದಿನೇಳು ಮಂದಿ ಜೈಲಿನಲ್ಲಿದ್ದಾರೆ.
ಈ ಹೈಪ್ರೊಫೈಲ್ ಕೇಸಿನಲ್ಲಿ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ಎಲ್ಲರೂ ಶ್ಲಾಘಿಸಿದ್ದಾರೆ. ಅದರಲ್ಲೂ ಕೇಸ್ ಹ್ಯಾಂಡಲ್ ಮಾಡುತ್ತಿರುವ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸೆ ಸಿಕ್ಕಿದೆ. ಇದೀಗ ರೇಣುಕಾಸ್ವಾಮಿ ತಂದೆ-ತಾಯಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮನವಿ ಮಾಡಿಕೊಂಡಿದ್ದಾರೆ.
ಸಾವಿಗೀಡಾದ ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಇವರು ತಮ್ಮ ಮಗಳಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮನೆಗೆ ರೇಣುಕಾಸ್ವಾಮಿ ಒಬ್ಬನೇ ಮಗ. ಅಪೋಲೋ ಮೆಡಿಸನ್ ನಲ್ಲಿ ಕೆಲಸ ಮಾಡಿಕೊಂಡು ಮನೆ ನಿಭಾಯಿಸುತ್ತಿದ್ದ. ಹೆಂಡತಿ ಬೇರೆ ಗರ್ಭಿಣಿ. ಈಗ ಮನೆ ನೋಡಿಕೊಳ್ಳುವವರು ಯಾರು ಇಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಲಸ ಕೇಳಿದ್ದಾರೆ.
ಈ ಸಂದರ್ಭದಲ್ಲಿ ಸಚಿವ ಚಲುವರಾಯ ಸ್ವಾಮಿ, ಮಾಜಿ ಸಚಿವ ಹೆಚ್. ಆಂಜನೇಯ ಸೇರಿದಂತೆ ಇತರರು ಇದ್ದರು.