For the best experience, open
https://m.suddione.com
on your mobile browser.
Advertisement

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆಗಳನ್ನು ದುರಸ್ಥಿ ಮಾಡಿ : ಕರವೇ ಕಾರ್ಯಕರ್ತರ ಒತ್ತಾಯ

07:55 PM Dec 19, 2024 IST | suddionenews
ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆಗಳನ್ನು ದುರಸ್ಥಿ ಮಾಡಿ   ಕರವೇ ಕಾರ್ಯಕರ್ತರ ಒತ್ತಾಯ
Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 19 : ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆಗಳನ್ನು ದುರಸ್ಥಿ ಮಾಡದಿರುವ ಲೋಕೋಪಯೋಗಿ ಇಲಾಖೆ ನಿರ್ಲಕ್ಷೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ

Advertisement

ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಗರಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ-13 ರಲ್ಲಿ ಆಗಿಂದಾಗ್ಗೆ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿರುತ್ತವೆ. ರೈಲ್ವೆ ಅಂಡರ್ ಬ್ರಿಡ್ಜ್‍ನಲ್ಲಿ ರಸ್ತೆ ಸಿಂಕ್ ಆಗಿದೆ. ಸರ್ವಿಸ್ ರಸ್ತೆಗಳಲ್ಲಿ ಗಿಡ-ಮರಗಳಿಲ್ಲ. ಅಪಘಾತದಿಂದ ಮೃತಪಟ್ಟ ಪ್ರಾಣಿಗಳ ದೇಹಗಳನ್ನು ತೆಗೆಯುವುದಿಲ್ಲ. ಯಾವುದೇ ನಿರ್ಬಂಧವಿಲ್ಲದೆ ವಾಹನಗಳಿಂದ ಟೋಲ್ ಮಾತ್ರ ಸಂಗ್ರಹಿಸಲಾಗುತ್ತಿದೆಯೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Advertisement

ಚಿತ್ರದುರ್ಗ ಪ್ರವೇಶಿಸುವ ರಾಷ್ಟ್ರೀಯ ಹೆದ್ದಾರಿ-ನಾಲ್ಕರ ಎರಡು ಬದಿಯಲ್ಲಿ ವಿದ್ಯುತ್ ದೀಪಗಳಿಲ್ಲ. ರಾತ್ರಿ ವೇಳೆಯಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ-13 ರಲ್ಲಿ ಶಾಲಾ-ಕಾಲೇಜುಗಳಿದ್ದು, ದಿನನಿತ್ಯವೂ ಮಕ್ಕಳು ಜೀವ ಭಯದಿಂದ ಓಡಾಡುವಂತಾಗಿದೆ.
ಪ್ರಶ್ನಿಸಿದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದಾರೆ. ಕನ್ನಡ ಭಾಷೆ ಬಾರದ ಈ ಅಧಿಕಾರಿಗಳು ಹಿಂದಿ ತೆಲುಗಿನಲ್ಲಿ ಮಾತನಾಡುತ್ತಾರೆ. ಕನ್ನಡಿಗರನ್ನು ನೇಮಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಕೆ.ಮಹಂತೇಶ್ ಆಗ್ರಹಿಸಿದರು.

ಓಬಳೇಶ್‍ಯಾದವ್, ಕೃಷ್ಣಮೂರ್ತಿ, ಸತೀಶ್, ಮೋಹನ್‍ಬಾಬು, ರವಿಕುಮಾರ್, ಮಾರುತಿ, ಅನಿಲ್‍ಕುಮಾರ್, ಧನಂಜಯ, ಸೋಮಣ್ಣ, ಶ್ರೀನಿವಾಸ್ ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags :
Advertisement