For the best experience, open
https://m.suddione.com
on your mobile browser.
Advertisement

ತಾಯಿಯನ್ನು ಗೌರವಿಸಿದಂತೆ ಕನ್ನಡವನ್ನೂ ಗೌರವಿಸಿ : ಶಾಸಕ ಡಾ.ಎಂ.ಚಂದ್ರಪ್ಪ

05:41 PM Nov 01, 2024 IST | suddionenews
ತಾಯಿಯನ್ನು ಗೌರವಿಸಿದಂತೆ ಕನ್ನಡವನ್ನೂ ಗೌರವಿಸಿ   ಶಾಸಕ ಡಾ ಎಂ ಚಂದ್ರಪ್ಪ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಹೊಳಲ್ಕೆರೆ, ನವೆಂಬರ್. 01 : ಕನ್ನಡ ನಾಡು-ನುಡಿ, ನೆಲ, ಜಲದ ಬಗ್ಗೆ ಮಕ್ಕಳಲ್ಲಿ ಚಿಕ್ಕಂದಿನಿಂದಲೆ ಅಭಿಮಾನ ಮೂಡಿಸುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

Advertisement

ಪಟ್ಟಣದ ಸಂವಿಧಾನ ಸೌಧದಲ್ಲಿ ಶುಕ್ರವಾರ 69 ನೇ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡಾಂಭೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

Advertisement

ಏಕಿಕರಣಕ್ಕಾಗಿ ಅನೇಕ ಮಹನೀರು ಹೋರಾಡಿ ಪ್ರಾಣ ತ್ಯಾಗ ಮಾಡಿದ ಫಲವಾಗಿ ನಾವುಗಳೆಲ್ಲಾ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸುತ್ತಿದ್ದೇವೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪ, ಆಲೂರು ವೆಂಕಟರಾಯರು ಸೇರಿದಂತೆ ಅನೇಕ ಹಿರಿಯರು ಕನ್ನಡಕ್ಕೆ ಶ್ರಮಿಸಿದ್ದಾರೆ. ಅಂತಹವರನ್ನೆಲ್ಲಾ ನೆನಪಿಸಿಕೊಳ್ಳಬೇಕೆಂದರು.

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವ ಭಾಷೆ ಯಾವುದಾದರೂ ಇದ್ದರೆ ಅದು ಕನ್ನಡ ಮಾತ್ರ. ಕನ್ನಡದ ಜೊತೆ ಬೇರೆ ಭಾಷೆಗಳನ್ನು ಕಲಿಯುವುದು ತಪ್ಪಲ್ಲ. ಆದರೆ ತಾಯಿಯನ್ನು ಗೌರವಿಸಿದಂತೆ ಕನ್ನಡವನ್ನು ಪ್ರತಿಯೊಬ್ಬರು ಗೌರವಿಸಬೇಕು. ಸುಂದರವಾದ ಭಾಷೆ ಕನ್ನಡಕ್ಕೆ ಶಾಲಾ-ಕಾಲೇಜುಗಳಲ್ಲಿ ಹೆಚ್ಚಿನ ಒತ್ತು ಕೊಡಬೇಕು. ಸರ್ಕಾರಿ ಶಾಲೆಗೆ ಬರುವ ಮಕ್ಕಳಿಗೆ ಸರ್ಕಾರ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿದೆ. ಹೊಳಲ್ಕೆರೆ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕಾಗಿ ಸ್ವಂತ ಖರ್ಚಿನಿಂದ ಬಸ್ ವ್ಯವಸ್ಥೆ ಕಲ್ಪಿಸಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಮೂರ್ತಿ, ಕನ್ನಡ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಪಿ.ಹನುಮಂತಪ್ಪ, ತಹಶೀಲ್ದಾರ್ ಬೀಬಿ ಫಾತಿಮ, ತಾಲ್ಲೂಕು ಪಂ ಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಹೆಚ್. ಪುರಸಭೆ ಸದಸ್ಯರುಗಳಾದ ಆರ್.ಎ.ಅಶೋಕ್, ಮುರುಗೇಶ್, ಮಲ್ಲಿಕಾರ್ಜುನಸ್ವಾಮಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು.

Advertisement
Tags :
Advertisement