Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಸಿ. ಶಿವಯೋಗಿ ಕಳಸದ ನೇಮಕ

11:50 AM Mar 02, 2024 IST | suddionenews
Advertisement

 

Advertisement

ಸುದ್ದಿಒನ್,  ಚಿತ್ರದುರ್ಗ, ಮಾರ್ಚ್. 02 : ಸುಪ್ರೀಂ ಕೋರ್ಟ್ ಆದೇಶದಂತೆ ಇದೀಗ ಮುರುಘಾ ಮಠದ ಆಡಳಿತ ಮಂಡಳಿಯನ್ನು ಸರ್ಕಾರ ಬದಲಾವಣೆ ಮಾಡಿದೆ.

ಗಡುವು ನೀಡಿದ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಿದೆ. ಸರ್ಕಾರದ ಆದೇಶದಂತೆ ಮುರುಘಾ ಮಠದ ಆಡಳಿತಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಸಿ. ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಿ, ಆದೇಶ ಹೊರಡಿಸಿದೆ. ಜೊತೆಗೆ ಸಮಿತಿಯನ್ನು ನೇಮಕ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

ಫೆಬ್ರವರಿ 27ರಂದು ಸುಪ್ರೀಂಕೋರ್ಟ್ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಮೂರು ದಿನಗಳಲ್ಲಿ ಸಮಿತಿ ರಚನೆ ಮಾಡಲು ಆದೇಶಿಸಿತ್ತು. ಅದರಂತೆ ಮಠ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಮುರುಘಾ ಶರಣರು, ಮಠ ಹಾಗೂ ವಿದ್ಯಾಪೀಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹಿರಿಯೂರಿನ ಮಾಜಿ ಸಚಿವ ಹೆಚ್. ಏಕಾಂತಯ್ಯ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಮಹತ್ವದ ತೀರ್ಪು ನೀಡಿ, ರಾಜ್ಯ ಸರ್ಕಾರಕ್ಕೆ ತಿಳಿಸಿತ್ತು. ಅದರಂತೆ ರಾಜ್ಯ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ.

Advertisement
Tags :
.ಜೆ.ಎಂ. ವಿದ್ಯಾಪೀಠAdministratorappointedbengaluruchitradurgaRetired IAS officer C Shivayogi Kalasadsjm Vidyapeethsuddionesuddione newsಆಡಳಿತಾಧಿಕಾರಿಚಿತ್ರದುರ್ಗನಿವೃತ್ತ ಐಎಎಸ್ ಅಧಿಕಾರಿನೇಮಕಬೆಂಗಳೂರುಸಿ. ಶಿವಯೋಗಿ ಕಳಸದಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article