For the best experience, open
https://m.suddione.com
on your mobile browser.
Advertisement

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

08:15 PM Apr 17, 2024 IST | suddionenews
ಹಿರಿಯೂರು ಬಳಿ ರಸ್ತೆ ಅಪಘಾತ   15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ  ಆಸ್ಪತ್ರೆಗೆ ದಾಖಲು
Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

Advertisement
Advertisement

ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಗಾಯಗೊಂಡ 15 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹಿರಿಯೂರು ಮತ್ತು ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Advertisement
Tags :
Advertisement