Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

08:15 PM Apr 17, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

Advertisement

ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಗಾಯಗೊಂಡ 15 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹಿರಿಯೂರು ಮತ್ತು ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Advertisement
Tags :
admitted to hospitalbengaluruchitradurgaHiriyur 15 passengers injuredLatest newsroad accidentsuddionesuddione newsಆಸ್ಪತ್ರೆಗೆ ದಾಖಲುಚಿತ್ರದುರ್ಗಬೆಂಗಳೂರುರಸ್ತೆ ಅಪಘಾತಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article