For the best experience, open
https://m.suddione.com
on your mobile browser.
Advertisement

ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ರೂ.1 ಲಕ್ಷ ಬಹುಮಾನ: DHO ಡಾ.ಜಿ.ಪಿ.ರೇಣುಪ್ರಸಾದ್

07:57 PM Jul 06, 2024 IST | suddionenews
ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ರೂ 1 ಲಕ್ಷ ಬಹುಮಾನ  dho ಡಾ ಜಿ ಪಿ ರೇಣುಪ್ರಸಾದ್
Advertisement

ಸುದ್ದಿಒನ್, ಚಿತ್ರದುರ್ಗ, ಜುಲೈ.06 :ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ  ನಿಷೇಧ  ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗಪತ್ತೆಯು ಶಿಕ್ಷಾರ್ಹ ಅಪರಾಧವಾಗಿದ್ದು, ಭ್ರೂಣ ಲಿಂಗ ಪತ್ತೆ ಅಥವಾ ಹೆಣ್ಣು ಭ್ರೂಣ ಹತ್ಯೆ ಕೈಗೊಳ್ಳುವವರ ಬಗೆಗಿನ ಮಾಹಿತಿ ನೀಡುವವರಿಗೆ ರೂ.01 ಲಕ್ಷ ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.

Advertisement
Advertisement

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹೆಣ್ಣು ಭ್ರೂಣ ಹತ್ಯೆ ಕುರಿತು ಮಾಹಿತಿ ನೀಡಿ ಯಶಸ್ವಿಗೊಂಡ ಗುಪ್ತಕಾರ್ಯಾಚರಣೆಯ ಮಾಹಿತಿದಾರರಿಗೆ ಬಹುಮಾನವಾಗಿ ನೀಡಲಾಗುತ್ತಿದ್ದ ರೂ.50,000 ಮೊತ್ತವು ರೂ.01 ಲಕ್ಷಕ್ಕೆ ಏರಿಕೆಯಾಗಿದ್ದು, ಮಾಹಿತಿದಾರರ  ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.

Advertisement
Advertisement

ಸಭೆಯಲ್ಲಿ ಪಿಸಿಪಿಎನ್‍ಡಿಟಿ ಸಲಹಾ ಸಮಿತಿ ಅಧ್ಯಕ್ಷೆ ಡಾ.ಎಸ್.ಸೌಮ್ಯ, ಸದಸ್ಯರಾದ ಡಾ.ಸತ್ಯನಾರಾಯಣ, ಎಂ.ಉಮೇಶ್, ಕೆ.ಪಿ.ಮೀನಾಕ್ಷಿ ಇದ್ದರು.

Tags :
Advertisement