ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ರೂ.1 ಲಕ್ಷ ಬಹುಮಾನ: DHO ಡಾ.ಜಿ.ಪಿ.ರೇಣುಪ್ರಸಾದ್
ಸುದ್ದಿಒನ್, ಚಿತ್ರದುರ್ಗ, ಜುಲೈ.06 :ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗಪತ್ತೆಯು ಶಿಕ್ಷಾರ್ಹ ಅಪರಾಧವಾಗಿದ್ದು, ಭ್ರೂಣ ಲಿಂಗ ಪತ್ತೆ ಅಥವಾ ಹೆಣ್ಣು ಭ್ರೂಣ ಹತ್ಯೆ ಕೈಗೊಳ್ಳುವವರ ಬಗೆಗಿನ ಮಾಹಿತಿ ನೀಡುವವರಿಗೆ ರೂ.01 ಲಕ್ಷ ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹೆಣ್ಣು ಭ್ರೂಣ ಹತ್ಯೆ ಕುರಿತು ಮಾಹಿತಿ ನೀಡಿ ಯಶಸ್ವಿಗೊಂಡ ಗುಪ್ತಕಾರ್ಯಾಚರಣೆಯ ಮಾಹಿತಿದಾರರಿಗೆ ಬಹುಮಾನವಾಗಿ ನೀಡಲಾಗುತ್ತಿದ್ದ ರೂ.50,000 ಮೊತ್ತವು ರೂ.01 ಲಕ್ಷಕ್ಕೆ ಏರಿಕೆಯಾಗಿದ್ದು, ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಪಿಸಿಪಿಎನ್‍ಡಿಟಿ ಸಲಹಾ ಸಮಿತಿ ಅಧ್ಯಕ್ಷೆ ಡಾ.ಎಸ್.ಸೌಮ್ಯ, ಸದಸ್ಯರಾದ ಡಾ.ಸತ್ಯನಾರಾಯಣ, ಎಂ.ಉಮೇಶ್, ಕೆ.ಪಿ.ಮೀನಾಕ್ಷಿ ಇದ್ದರು.