For the best experience, open
https://m.suddione.com
on your mobile browser.
Advertisement

ಭಾರತದ ಮಹಾನ್ ಚೇತನ ಸಾವಿತ್ರಿಬಾಯಿ ಪುಲೆ : ಹರಿಯಬ್ಬೆಯ ತಿಪ್ಪೇಶ್

04:32 PM Jan 04, 2024 IST | suddionenews
ಭಾರತದ ಮಹಾನ್ ಚೇತನ ಸಾವಿತ್ರಿಬಾಯಿ ಪುಲೆ   ಹರಿಯಬ್ಬೆಯ ತಿಪ್ಪೇಶ್
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.04 : ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡುವುದರ ಜೊತೆ ಮೌಢ್ಯದ ವಿರುದ್ದ ಹೋರಾಡಿದ ಮಾತೆ ಸಾವಿತ್ರಿಬಾಯಿ ಪುಲೆ ಭಾರತದ ಮೊಟ್ಟ ಮೊದಲ ಶಿಕ್ಷಕಿ ಎಂದು ಉಪನ್ಯಾಸಕ ಹರಿಯಬ್ಬೆಯ ತಿಪ್ಪೇಶ್ ಟಿ. ಹೇಳಿದರು.

Advertisement

ಜಂಬೂ ದ್ವೀಪ ಕರ್ನಾಟಕ ಮಹಾತ್ಮಪುಲೆ ಅಧ್ಯಯನ ಕೇಂದ್ರದಲ್ಲಿ ಬುಧವಾರ ನಡೆದ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

1831 ರಲ್ಲಿ ಮಹಾರಾಷ್ಟ್ರದ ಸತಾರ್ ಜಿಲ್ಲೆಯಲ್ಲಿ ಜನಿಸಿದ ಸಾವಿತ್ರಿಬಾಯಿ ಪುಲೆ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿದುಕೊಂಡಿದ್ದಾರೆ. ವಿದ್ಯೆ ಎಂದರೆ ಕೇವಲ ಬ್ರಾಹ್ಮಣರ ಸ್ವತ್ತಾಗಿದ್ದ ಕಾಲದಲ್ಲಿ ಹೆಣ್ಣು ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕೆಂಬ ಛಲ ಅವರಲ್ಲಿತ್ತು. ಪ್ರಶ್ನೆ ಮಾಡದೆ ಯಾವುದನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಅಂತಹ ಗುಣ ಅವರದು ಎಂದು ಸ್ಮರಿಸಿದರು.

ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಲು ಹೋಗುತ್ತಿದ್ದ ಸಂದರ್ಭದಲ್ಲಿ ಸಾವಿತ್ರಿಬಾಯಿ ಪುಲೆ ಮೇಲೆ ಕಲ್ಲು, ಮೊಟ್ಟೆ, ಸಗಣಿಯನ್ನು ಎಸೆಯಲಾಗುತ್ತಿತ್ತು. ಇಷ್ಟೆಲ್ಲಾ ಅವಮಾನ ಸಹಿಸಿಕೊಂಡು ಅಕ್ಷರ ಕ್ರಾಂತಿಯನ್ನೇ ಉಂಟು ಮಾಡಿದ್ದರಿಂದ ಭಾರತದ ಮೊಟ್ಟ ಮೊದಲ ಶಿಕ್ಷಕಿ ಎನಿಸಿಕೊಂಡಿದ್ದಾರೆ. ಮನೆ ಮನೆಗೆ ಹೋಗಿ ಹಣ ಬೇಡಿ ನಂತರ ಬ್ರಿಟೀಷರು ಕೊಡುತ್ತಿದ್ದ ಹಣದಿಂದ ಮಕ್ಕಳಿಗೆ ವಿದ್ಯೆ ಕಲಿಸುತ್ತಿದ್ದರು. ದೃಢ ನಿರ್ಧಾರ ದಿಟ್ಟ ನಿಲುವಿತ್ತು. ಮಹಾರಾಷ್ಟ್ರದ ಮರಾಠಿಗರಿಗಷ್ಟೆ ಬೇಕಾದವರಲ್ಲ. ಇಡಿ ಭಾರತದ ಮಹಾನ್ ಚೇತನ ಸಾವಿತ್ರಿಬಾಯಿ ಪುಲೆ ಜ್ಞಾನದಾನ ಶ್ರೇಷ್ಟ ದಾನ ಎನ್ನುತ್ತಿದ್ದರು.
ಶಿಕ್ಷಣದ ಜೊತೆ ಪ್ಲೇಗ್ ರೋಗಿಗಳ ಆರೈಕೆ ಮಾಡುತ್ತಲೆ 1897 ರಲ್ಲಿ ಅಸು ನೀಗಿದರು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಡಿ.ಟಿ.ಜಗನ್ನಾತ್ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆ ಉದ್ಗಾಟಿಸಿ ಮಾತನಾಡುತ್ತ ಅಕ್ಷರದವ್ವನ ಆಸೆಯಂತೆ ನಾವೆಲ್ಲರೂ ಹೆಚ್ಚು ಹೆಚ್ಚು ಶಿಕ್ಷಣವಂತರಾದಾಗ ಮಾತ್ರ ಸಾವಿತ್ರಿಬಾಯಿ ಪುಲೆರವರ ಶ್ರಮ ಸಾರ್ಥಕವಾಗುತ್ತದೆ. ಇಂತಹ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.

ಸಾವಿತ್ರಿಬಾಯಿ ಪುಲೆ ಕೇವಲ ಶಿಕ್ಷಣ ಕಲಿಸುವುದಕ್ಕಷ್ಟೆ ಸೀಮಿತವಾಗಿರಲಿಲ್ಲ. ಮೌಢ್ಯದ ವಿರುದ್ದವೂ ನಿರಂತರವಾಗಿ ಹೋರಾಡಿದ ದಿಟ್ಟ ಮಹಿಳೆ. ಅನೇಕ ಅವಮಾನಗಳನ್ನು ಅನುಭವಿಸಿದರೂ ಹೆಣ್ಣು ಮಕ್ಕಳಿಗೆ ಶಿಕ್ಷಣ ಹೇಳಿಕೊಡುವುದರಿಂದ ಹಿಂದೆ ಸರಿಯಲಿಲ್ಲ. ಅಂತಹ ದೀಮಂತ ಮಹಿಳೆಯ ಹಾದಿಯಲ್ಲಿ ಎಲ್ಲರೂ ಸಾಗಬೇಕಿದೆ ಎಂದು ತಿಳಿಸಿದರು.

ಜಂಬೂ ದ್ವೀಪ ಕರ್ನಾಟಕ ಅಧ್ಯಕ್ಷ ರಾಮಣ್ಣ ಪ್ರಾಸ್ತಾವಿಕವಾಗಿ ಮಾತನಾಡುತ್ತ ಬಾಬಾ ಸಾಹೇಬರ ಚಿತ್ರಗಳನ್ನು ಸಾಕಾರಗೊಳಿಸಬೇಕು ಅನ್ನುವುದಾದರೆ ನಮ್ಮ ಬೇರುಗಳನ್ನು ನಾವು ಗಟ್ಟಿಗೊಳಿಸಿಕೊಳ್ಳಬೇಕಾದ ಅಗತ್ಯವಿದೆ. ಅದಕ್ಕಾಗಿ ಸಂಘಟನೆ ಮುಖ್ಯ. ಸಾವಿತ್ರಿಬಾಯಿ ಪುಲೆರವರ ಆಶಯದಂತೆ ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು ಎಂದು ಕರೆ ನೀಡಿದರು.

ಮಲ್ಲಾಡಿಹಳ್ಳಿ ಪ್ರಾಂಶುಪಾಲರಾದ ಆಯುಶ್ಮತಿ ಸಿದ್ದಲಿಂಗಮ್ಮ ಅಧ್ಯಕ್ಷತೆ ವಹಿಸಿದ್ದರು.
ಕೃಷಿ ಅಧಿಕಾರಿ ಡಾ.ಟಿ.ಪಾರ್ವತಮ್ಮ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷೆ ಶ್ರೀಮತಿ ಬಿ.ಟಿ.ಲೋಲಾಕ್ಷಮ್ಮ, ಡಾ.ಮೋಹನ್, ರಾಘವೇಂದ್ರ ವೇದಿಕೆಯಲ್ಲಿದ್ದರು.
ಉಪನ್ಯಾಸಕಿ ಡಾ.ಮಮತ, ಮುಖ್ಯ ಶಿಕ್ಷಕ ಹನುಮಂತಪ್ಪ ಇವರುಗಳನ್ನು ಸನ್ಮಾನಿಸಲಾಯಿತು.
ಉಪನ್ಯಾಸಕ ಡಾ.ಬಿ.ಎಂ.ಗುರುನಾಥ್ ನಿರೂಪಿಸಿ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

Advertisement
Tags :
Advertisement