Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವಿಜ್ಞಾನ ಕಾರ್ಯಾಗಾರಗಳು ಶಿಕ್ಷಕರ ಜ್ಞಾನ ಸಂಪತ್ತನ್ನು ಹೆಚ್ಚಿಸುತ್ತವೆ : ಬಿಇಒ ಸುರೇಶ್

06:11 PM Jul 14, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ವಿಜ್ಞಾನ ಕಾರ್ಯಾಗಾರಗಳು ಶಿಕ್ಷಕರ ಜ್ಞಾನ ಸಂಪತ್ತನ್ನು ಹೆಚ್ಚಿಸುತ್ತವೆ. ಆತ್ಮವಿಶ್ವಾಸ, ಸೃಜನಶೀಲತೆಯಂತಹ ಸಾಮರ್ಥ್ಯವನ್ನು ತುಂಬುವುದರೊಂದಿಗೆ ಶಿಕ್ಷಕರ ಮನಸ್ಸನ್ನು ಹರಿತಗೊಳಿಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಮೂಡಿಸುತ್ತವೆ" ಎಂದು ಚಳ್ಳಕೆರೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಚಳ್ಳಕೆರೆ ನಗರದ ರೋಟರಿ ಬಾಲಭವನದಲ್ಲಿ ಶನಿವಾರ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಚಿತ್ರದುರ್ಗ, ಶಾಲಾ ಶಿಕ್ಷಣ ಇಲಾಖೆ, ರೋಟರಿ ಕ್ಲಬ್, ಹೊಂಗಿರಣ ವಿದ್ಯಾ ಸಂಸ್ಥೆ ಹಾಗೂ ಚಳ್ಳಕೆರೆ ವಿಜ್ಞಾನ ಕ್ಲಬ್ ಗಳ ಸಹಯೋಗದಲ್ಲಿ ಪ್ರೌಢಶಾಲಾ ಶಿಕ್ಷಕರಿಗಾಗಿ ನಡೆದ ವಿಜ್ಞಾನ ಉಪನ್ಯಾಸ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Advertisement

ಅವರು ಮುಂದುವರೆದು ಮಾತನಾಡಿ, "ಎಸೆಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಶಿಕ್ಷಕರಿಗೆ ಕಾರ್ಯಾಗಾರಗಳು ತುಂಬಾ ಉಪಯುಕ್ತ. ಈ ಬಾರಿ ಉತ್ತಮ ಫಲಿತಾಂಶ ತರಲು ಪ್ರಯತ್ನಿಸಿ ಎಂದು ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ " ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ನಮ್ಮ ಸಂಸ್ಥೆ ಅನೇಕ ವೈಜ್ಞಾನಿಕ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಅಧ್ಯಕ್ಷರಾದ ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ ಮಾತನಾಡಿ, ಮನುಷ್ಯರನ್ನು ಮಾನವ ಸಂಪನ್ಮೂಲವನ್ನಾಗಿ ಪರಿವರ್ತಿಸುವುದು ವಿಜ್ಞಾನ ಶಿಕ್ಷಕರ ಪ್ರಮುಖ ಆದ್ಯತೆಯಾಗಬೇಕು. ವಿಜ್ಞಾನವನ್ನು ಬದುಕಿನ ಮಾರ್ಗವಾಗಿ ಕಲಿಸಬೇಕಾದ ಅವಶ್ಯಕತೆಯಿದೆ ಎಂದು ತಿಳಿಸಿದರು.

ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ವಿಜ್ಞಾನ ವಿಷಯ ಪರಿವೀಕ್ಷಕರಾದ ಶ್ರೀ ಎಚ್.ಗೋವಿಂದಪ್ಪ, ಸಾಹಿತಿ ಶಿವಲಿಂಗಪ್ಪ, ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ನಾಗೇಶ್, ಹೊಂಗಿರಣ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಎಚ್.ಎಸ್.ನಾಗೇಶ್, ಸಂಸ್ಥೆಯ ಖಜಾಂಚಿಗಳಾದ ಶ್ರೀ ಕೆ.ವಿ.ನಾಗಲಿಂಗರೆಡ್ಡಿ, ವಿಜ್ಞಾನ ಕ್ಲಬ್ ಅಧ್ಯಕ್ಷರಾದ ಎನ್ .ಬಸವರಾಜ್ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕರಾದ ಮಂಜುನಾಥ್ ಸ್ವಾಗತಿಸಿ, ರಾಜ್ಯಪ್ರಶಸ್ತಿ ಶಿಕ್ಷಕ ನಾಗಭೂಷಣ್ ಕಾರ್ಯಕ್ರಮ ನಿರೂಪಿಸಿದರು.

Advertisement
Tags :
bengaluruBEO SureshchitradurgaIncreaseknowledgeSciencesuddionesuddione newsteachersworkshopsಕಾರ್ಯಾಗಾರಗಳುಚಿತ್ರದುರ್ಗಜ್ಞಾನಬೆಂಗಳೂರುವಿಜ್ಞಾನಶಿಕ್ಷಕರುಸಂಪತ್ತು ಬಿಇಒ ಸುರೇಶ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article