Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

08:47 PM Oct 05, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ಇಂದು ಸಂಜೆ 4 ಗಂಟೆ ವೇಳೆಗೆ ನೆರವೇರಿತು.

Advertisement

ಕಾರ್ಯಕ್ರಮವನ್ನು ಸಂಸದರಾದ ಶ್ರೀ ಗೋವಿಂದ ಎಂ ಕಾರಜೋಳ ಚಮ್ಮಾಳ ಬಾರಿಸುವುದರ ಮೂಲಕ ಚಾಲನೆ ನೀಡಿದರು. ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನವು ಬಸವಮಂಟಪರಸ್ತೆಯಿಂದ ಪ್ರಾರಂಭವಾಗಿ ರಂಗಯ್ಯನ ಬಾಗಿಲು, ದೊಡ್ಡಪೇಟೆ, ಚಿಕ್ಕಪೇಟೆ, ಬುರುಜಿನ ಹಟ್ಟಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ನೀಕಂಠೇಶ್ವರ ದೇವಸ್ಥಾನ, ಗಾಂಧಿ ವೃತ್ತ, ಬಿ.ಡಿ.ರಸ್ತೆ ಮೂಲಕ ಹಳೆಯ ಮಾಧ್ಯಮಿಕ ಶಾಲಾ ಆವರಣ ತಲುಪಿತು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿ ಅಧ್ಯಕ್ಷರಾದ ಶ್ರೀ. ಶಿವಯೋಗಿ ಸಿ.ಕಳಸದ್, ಆಡಳಿತಮಂಡಳಿ ಸದಸ್ಯರಾದ ಡಾ. ಶ್ರೀ. ಬಸವಕುಮಾರ ಸ್ವಾಮಿಗಳು, ಶ್ರೀ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಜಗದ್ಗುರು ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮಿಗಳು, ದಾವಣಗೆರೆ ವಿರಕ್ತಮಠದ ಶ್ರೀ.ಬಸವಪ್ರಭು ಸ್ವಾಮಿಗಳು, ವನಕಲ್ ಮಠದ ಡಾ. ಶ್ರೀ. ಬಸವ ರಮಾನಂದ ಸ್ವಾಮಿಗಳು, ಗುರುಮಠಕಲ್ ಖಾಸಾ ಶ್ರೀ ಮುರುಘಾಮಠ ಶ್ರೀಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ಬಸವಮೂರ್ತಿ ಶ್ರೀ ಕುಂಬಾರ ಗುಂಡಯ್ಯ ಸ್ವಾಮಿಗಳು, ಚಿಗರಹಳ್ಳಿ ಶ್ರೀ ಮರುಳಶಂಕರದೇವ ಗುರುಪೀಠದ ಶ್ರೀ ಸಿದ್ಧಬಸವ ಕಬೀರ ಸ್ವಾಮಿಗಳು, ಉಳವಿ ಶ್ರೀ. ಬಸವಲಿಂಗಮೂರ್ತಿ ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಶಿವಾನಂದ ಸ್ವಾಮಿಗಳು, ಚಿತ್ರದುರ್ಗ ಶ್ರೀ ಬಸವ ಚೇತನ ಸ್ವಾಮಿಗಳು, ಶಿಕಾರಿಪುರದ ಶ್ರೀಚನ್ನಬಸವ ಸ್ವಾಮಿಗಳು, ಡಿ.ಕಲ್ಕೆರೆ ಶ್ರೀ.ತಿಪ್ಪೇರುದ್ರಸ್ವಾಮಿಗಳು, ಮುಖಂಡರಾದ ಕೆ.ಸಿ.ನಾಗರಾಜ್, ಪಟೇಲ್ ಶಿವಕುಮಾರ್, ಕೆ.ಇ.ಬಿ. ಷಣ್ಮುಖಪ್ಪ, ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಗೊಪ್ಪೆ ಮಂಜುನಾಥ್, ಸಿದ್ದಾಪುರ ನಾಗಣ್ಣ, ಮೋಕ್ಷಾ ರುದ್ರಸ್ವಾಮಿ, ರುದ್ರಾಣಿ ಗಂಗಾಧರ್ , ವಿದ್ಯಾರ್ಥಿಗಳು, ಅಪಾರ ಭಕ್ತರು ಜಾಥದಲ್ಲಿ ಭಾಗವಹಿಸಿದ್ದರು.

Advertisement

Advertisement
Tags :
Palankki UtsavSharan Sanskoti 2024Sri Manmaharaja Niranjan Jagadguru Jayadevaಪಂಥ ಸಂಚಲನಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವಶರಣ ಸಂಸ್ಕøತಿ 2024ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀ
Advertisement
Next Article