Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಿದ್ದರಾಮಯ್ಯ ಬಜೆಟ್ | ಸಂತಸ ವ್ಯಕ್ತಪಡಿಸಿದ ಕಾರ್ಯಕರ್ತರು

06:28 PM Feb 16, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.16 : ಮೂರು ಗಂಟೆ ಹದಿನೈದು ನಿಮಿಷಗಳ ಕಾಲ ಬಜೆಟ್ ಮಂಡಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಐದು ನೂರು ಕೋಟಿ ರೂ.ಗಳನ್ನು ಘೋಷಿಸಿರುವುದು ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆ ಜನರ ಕನಸಿಗೆ ಪೂರಕವಾಗಿದೆ.  ಇದೊಂದು ಜನಪರ ಬಜೆಟ್ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮೋಕ್ಷರುದ್ರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

Advertisement

183 ಪುಟಗಳ ಬಜೆಟ್‍ನ್ನು ವಿಧಾನಸಭೆಯಲ್ಲಿ ಮಂಡಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಐದು ನೂರು ಕೋಟಿ ರೂ.ಗಳನ್ನು ಘೋಷಿಸಿ ಬಯಲುಸೀಮೆ ಜನರ ಆಶಯಗಳಿಗೆ ಸ್ಪಂದಿಸಿದ್ದಾರೆ. ಪ್ರತಿಪಕ್ಷಗಳ ಸಭಾತ್ಯಾಗದ ನಡುವೆಯೇ ಮೂರು ಲಕ್ಷ 71 ಸಾವಿರದ 383 ಕೋಟಿ ರೂ.ಗಳ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲಾ ಜಾತಿ ಧರ್ಮದವರಿಗೆ ಪ್ರಾಧಾನ್ಯತೆ ನೀಡಿರುವ ಬಜೆಟ್ ಇದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಶ್ರೀಮತಿ ರೇಣುಕಶಿವು ಸಂತಸ ವ್ಯಕ್ತಪಡಿಸಿದ್ದಾರೆ.

 

 

Advertisement
Tags :
budgetchitradurgaCM Siddaramaiahasuddionesuddione newsಕಾರ್ಯಕರ್ತರುಚಿತ್ರದುರ್ಗಬಜೆಟ್ಮುಖ್ಯಮಂತ್ರಿ  ಸಿದ್ದರಾಮಯ್ಯಸಂತಸ ವ್ಯಕ್ತಪಡಿಸಿದಸಿದ್ದರಾಮಯ್ಯ ಬಜೆಟ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article