For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ  ಸೋನಿಯಾಗಾಂಧಿರವರ ಜನ್ಮದಿನಾಚರಣೆ ಸಂಭ್ರಮ

05:32 PM Dec 09, 2023 IST | suddionenews
ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ  ಸೋನಿಯಾಗಾಂಧಿರವರ ಜನ್ಮದಿನಾಚರಣೆ ಸಂಭ್ರಮ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.09 : ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿರವರ ಹುಟ್ಟುಹಬ್ಬವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಚರಿಸಲಾಯಿತು.

Advertisement

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ಅತ್ತೆ ಇಂದಿರಾಗಾಂಧಿ, ಪತಿ ರಾಜೀವ್‍ಗಾಂಧಿಯ ಹತ್ಯೆಯಾದಂತ ಆತಂಕದ ಸ್ಥಿತಿಯಲ್ಲಿ ಸೋನಿಯಾಗಾಂಧಿ ಭಾರತವನ್ನು ಬಿಟ್ಟು ತನ್ನ ತವರು ಇಟಲಿಗೆ ಹೋಗಲಿಲ್ಲ. ಎ.ಐ.ಸಿ.ಸಿ. ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಮುನ್ನಾ ಸೋನಿಯಾಗಾಂಧಿ ಚಿತ್ರದುರ್ಗಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಜೊತೆ ಚರ್ಚಿಸಿ ಹೋಗಿದ್ದರು.

ಪ್ರಧಾನಿಯಾಗುವ ಅವಕಾಶ ಸಿಕ್ಕರೂ ಆಸೆ ಪಡದೆ ಮನಮೋಹನ್‍ಸಿಂಗ್‍ರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿ ಪಕ್ಷಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿ ಮಾದರಿ ಮಹಿಳೆ ಎನಿಸಿಕೊಂಡಿದ್ದಾರೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ ಮಾತನಾಡಿ ಇಂದಿರಾಗಾಂಧಿ, ರಾಜೀವ್‍ಗಾಂಧಿಯನ್ನು ಕಳೆದುಕೊಂಡು ದುಃಖದಲ್ಲಿದ್ದಾಗಲೂ ಸೋನಿಯಾಗಾಂಧಿ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವ ತೀರ್ಮಾನ ತೆಗೆದುಕೊಂಡರು. ಎರಡು ಬಾರಿ ಸಂಸದರಾಗಿ ಪ್ರಧಾನಿ ಹುದ್ದೆ ಸಿಕ್ಕರೂ ಅಲಂಕರಿಸಲಿಲ್ಲ ಅಂತಹ ತ್ಯಾಗಮಯಿ ಎಂದು ಸ್ಮರಿಸಿದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಪಾವಗಡದ ಹೆಚ್.ವಿ.ಕುಮಾರಸ್ವಾಮಿ ಮಾತನಾಡುತ್ತ ಕಾಂಗ್ರೆಸ್ ಪಕ್ಷಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ನೆಹರು, ಇಂದಿರಾಗಾಂಧಿ, ರಾಜೀವ್‍ಗಾಂಧಿರವರ ಕೊಡುಗೆ ಅಪಾರ.

ಹದಿನೆಂಟು ವರ್ಷಗಳ ಕಾಲ ಸೋನಿಯಾಗಾಂಧಿ ಪಕ್ಷದ ಸಾರಥ್ಯ ವಹಿಸಿ ಮುನ್ನಡೆಸಿಕೊಂಡು ಹೋಗಿದ್ದು ಸುಲಭವಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಕಾರ್ಯಕರ್ತರು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವಿಶ್ವವಿದ್ಯಾನಿಲಯ, ಅಣೆಕಟ್ಟೆ, ಬಿ.ಎಸ್.ಎನ್.ಎಲ್. ರೈಲ್ವೆ, ಹೆಚ್.ಎ.ಎಲ್. ಏರ್‍ಪೋರ್ಟ್ ಇವುಗಳನ್ನೆಲ್ಲಾ ತಂದಿದ್ದು, ಕಾಂಗ್ರೆಸ್. ಕೋಮುವಾದಿ ಬಿಜೆಪಿ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದೊಂದನ್ನೆ ಮಾರುತ್ತಿದೆ.

ಸೋನಿಯಾಗಾಂಧಿ ಮನಮೋಹನ್‍ಸಿಂಗ್‍ರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದರು. ಪಕ್ಷದ ಇತಿಹಾಸವನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಿ ಮುಂದಿನ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ವಿನಂತಿಸಿದರು.

ಕೆ.ಪಿ.ಸಿ.ಸಿ. ಕುಶಲಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷ ಆರ್.ಪ್ರಸನ್ನಕುಮಾರ್ ಮಾತನಾಡಿ ಸೋನಿಯಾಗಾಂಧಿ ಕೊಡುಗೆ ದೇಶಕ್ಕೆ ಅಪಾರ. ಅತ್ತೆ. ಗಂಡನನ್ನು ಕಳೆದುಕೊಂಡರೂ ಎದೆಗುಂದದೆ ಪಕ್ಷವನ್ನು ಪುನಶ್ಚೇತನಗೊಳಿಸುವಲ್ಲಿ ಹಿಂದೆ ಬೀಳಲಿಲ್ಲ. ಇನ್ನೇನು ನಾಲ್ಕೈದು ತಿಂಗಳಲ್ಲಿ ನಡೆಯುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ಶ್ರಮಿಸುವಂತೆ ಮನವಿ ಮಾಡಿದರು.

ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಿ.ಕೆ.ಮೀನಾಕ್ಷಿ ಮಾತನಾಡುತ್ತ ಸೋನಿಯಾಗಾಂಧಿ ಭಾರತಕ್ಕೆ ಮಾದರಿ ಮಹಿಳೆಯಾಗಿದ್ದಾರೆ. ಎಲ್ಲವನ್ನು ಕಳೆದುಕೊಂಡ ಆತಂಕದ ಸಂದರ್ಭದಲ್ಲಿ ಭಾರತವನ್ನು ತೊರೆದು ತವರು ದೇಶಕ್ಕೆ ಹೋಗಲಿಲ್ಲ. ತ್ಯಾಗಮಯಿ ಸೋನಿಯಾರವರ ಕೈಬಲಪಡಿಸಬೇಕಾಗಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ತಂದುಕೊಡುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಬಿ.ಜಿ.ಶ್ರೀನಿವಾಸ್, ಕಾರ್ಯದರ್ಶಿ ಶಬ್ಬೀರ್‍ಭಾಷ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್‍ನವಾಜ್, ದಲಿತ ಮುಖಂಡ ಬಿ.ರಾಜಣ್ಣ, ಚಾಂದ್‍ಪೀರ್, ಭಾಗ್ಯಮ್ಮ, ಕಾಂಗ್ರೆಸ್ ಎಸ್ಸಿ. ವಿಭಾಗದ ಅಧ್ಯಕ್ಷ ಜಯಣ್ಣ, ಸೇವಾದಳದ ಇಂದಿರಾ, ಜಿಲ್ಲಾ ಕಾಂಗ್ರೆಸ್ ಕಿಸಾನ್‍ಸೆಲ್ ವಿಭಾಗದ ಉಪಾಧ್ಯಕ್ಷ ಶಿವಲಿಂಗಪ್ಪ ಇನ್ನು ಅನೇಕರು ಸೋನಿಯಾಗಾಂಧಿ ಜನ್ಮದಿನದಲ್ಲಿ ಭಾಗವಹಿಸಿದ್ದರು.

Tags :
Advertisement