For the best experience, open
https://m.suddione.com
on your mobile browser.
Advertisement

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಶಿಕ್ಷಕರು

05:27 PM Jun 03, 2024 IST | suddionenews
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ   ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಶಿಕ್ಷಕರು
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 7899864552

Advertisement
Advertisement

ಸುದ್ದಿಒನ್, ಚಿತ್ರದುರ್ಗ, ಮೇ.03  : ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬಿರುಸಿನ ಮತದಾನ ನಡೆಯಿತು.

Advertisement

ಬೆಳಿಗ್ಗೆ ಎಂಟು ಗಂಟೆಗೆ ಮತದಾನ ಆರಂಭವಾದರೂ 11 ಗಂಟೆಯತನ ಮತದಾನ ಮಂದಗತಿಯಲ್ಲಿ ಸಾಗಿತು. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ನೂರಾರು ಶಿಕ್ಷಕ-ಶಿಕ್ಷಕಿಯರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಕೆಲವು ಶಿಕ್ಷಕರುಗಳು ಸಾಲಿನಲ್ಲಿ ನಿಂತು ಸುಸ್ತಾಗಿ ಕಟ್ಟೆ ಮೇಲೆ ಕುಳಿತಿದ್ದುದು ಕಂಡು ಬಂದಿತು.
ಎರಡು ಮತಘಟ್ಟೆಗಳನ್ನು ತೆರೆದಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮಧ್ಯಾಹ್ನ ಮೂರು ಗಂಟೆಯ ನಂತರ ಶಿಕ್ಷಕರು ಲವಲವಿಕೆಯಿಂದ ಮತದಾನ ಮಾಡಿದರು.
ಡಾ.ಬಿ.ಅಂಬೇಡ್ಕರ್ ಪ್ರತಿಮೆ ಮುಂಭಾಗ ನಗರಸಭೆಗೆ ಹೋಗುವ ದಾರಿಯಲ್ಲಿ ಬ್ಯಾರಿಕೇಡ್‍ಗಳನ್ನಿಟ್ಟು ಮತದಾರ ಶಿಕ್ಷಕರುಗಳಿಗೆ ಮಾತ್ರ ಮತ ಕೇಂದ್ರಕ್ಕೆ ಬಿಡಲಾಯಿತು.

ಚಿತ್ರದುರ್ಗ : ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪಕ್ಕ ಪಕ್ಕದಲಿಯೇ ನಿಂತು ಪರಸ್ಪರ ಜೈಕಾರಗಳನ್ನು ಕೂಗುತ್ತಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಂದ ತಕ್ಷಣ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್‍ಗಾಂಧಿಗೆ ಜೈ ಎಂದು ಕೂಗಿದರೆ,  ಬಿಜೆಪಿಯವರು ಮತ್ತೊಮ್ಮೆ ಮೋದಿ ಎಂದು ಜಯಘೋಷಗಳನ್ನು ಕೂಗಿತ್ತಿದ್ದರು.

ಎರಡು ಪಕ್ಷದವರು ಪೈಪೋಟಿ ಮೇಲೆ ಜೈಕಾರಗಳನ್ನು ಹಾಕುತ್ತಿದ್ದರು. ಬಿಜೆಪಿ. ಕಾಂಗ್ರೆಸ್ ಕಾರ್ಯಕರ್ತರು ಮಿಕ್ಸ್ ಆಗಿ ತಮ್ಮ ತಮ್ಮ ಪಕ್ಷಗಳ ನಾಯಕರುಗಳ ಪರ ಜೈಕಾರಗಳನ್ನು ಕೂಗುತ್ತಿದ್ದುದು, ನೋಡುಗರಿಗೆ ಒಂದು ರೀತಿಯ ಮನರಂಜನೆ ನೀಡುವಂತಿತ್ತು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ಉಪಾಧ್ಯಕ್ಷರುಗಳಾದ ಎಸ್.ಎನ್.ರವಿಕುಮಾರ್, ನಜ್ಮತಾಜ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರುಗಳಾದ ಆರ್.ಕೆ.ಸರ್ದಾರ್, ಬಿ.ಟಿ.ಜಗದೀಶ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಕೆ.ಪಿ.ಸಿ.ಸಿ.ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮುನಿರಾ ಎ.ಮಕಾಂದಾರ್, ಮೋಕ್ಷರುದ್ರಸ್ವಾಮಿ, ಕೆಡಿಪಿ. ಸದಸ್ಯ ಕೆ.ಸಿ.ನಾಗರಾಜ್, ಎಸ್ಸಿ. ವಿಭಾಗದ ಜಿಲ್ಲಾಧ್ಯಕ್ಷ ಜಯಣ್ಣ, ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೈಲಜಾರೆಡ್ಡಿ, ಬಸಮ್ಮ, ಕಾಂಚನ ಇನ್ನು ಅನೇಕರು ಜಮಾಯಿಸಿ ತಮ್ಮ ತಮ್ಮ ಅಭ್ಯರ್ಥಿಗಳ ಪರ ಶಿಕ್ಷಕರುಗಳಲ್ಲಿ ಮತಯಾಚಿಸಿದರು.

ಟೇಬಲ್‍ಗೆ ಕುಳಿತ ಜಿ.ಹೆಚ್.ತಿಪ್ಪಾರೆಡ್ಡಿ : ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನಗರ ಠಾಣೆ ಪಕ್ಕದ ರಸ್ತೆಯಲ್ಲಿ ಹಾಕಿದ್ದ ಶಾಮಿಯಾನದಡಿ ಟೇಬಲ್‍ನಲ್ಲಿ ಕುಳಿತಿದ್ದು, ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರ ಪರ ಶಿಕ್ಷಕರುಗಳಲ್ಲಿ ಮತಯಾಚಿಸಿದರು. ಮತ್ತೊಂದು ಬದಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಇವರುಗಳು ಟೇಬಲ್‍ನಲ್ಲಿ ಕುಳಿತು ಮತದಾರ ಶಿಕ್ಷಕರಗಳಿಗೆ ಓಟಿಂಗ್ ಸ್ಪಿಪ್ ನೀಡುತ್ತಿದ್ದರು. ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಡಿ.ಸುಧಾಕರ್ ಇವರುಗಳು ಉಭಯ ಕುಶಲೋಪರಿ ಹಂಚಿಕೊಂಡರು.
ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ. ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಈ ಸಂದರ್ಭದಲ್ಲಿದ್ದರು.

Advertisement
Tags :
Advertisement