Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಫೆಬ್ರವರಿ 24ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

05:38 PM Feb 20, 2024 IST | suddionenews
Advertisement

Advertisement

 

ಚಿತ್ರದುರ್ಗ,ಫೆಬ್ರವರಿ.20 : ನಗರದ ಹೊಳಲ್ಕೆರೆ ರಸ್ತೆಯ ಶಾರದಮ್ಮ ಆರ್.ಎಸ್.ರುದ್ರಪ್ಪ ಕಲ್ಯಾಣ ಮಂಟಪದ ಪಕ್ಕದಲ್ಲಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಇದೇ ಫೆಬ್ರವರಿ 24ರಂದು ಬಾರತ ಹುಣ್ಣಿಮೆ ಅಂಗವಾಗಿ 77ನೇ ವರ್ಷದ ಶ್ರೀ ರೇಣುಕಾಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

Advertisement

ಫೆಬ್ರವರಿ 24ರಂದು ಶನಿವಾರ ಶ್ರೀ ರೇಣುಕಾಯಲ್ಲಮ್ಮ ದೇವಿಗೆ (ಜಡೇಯಲ್ಲಮ್ಮ) ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ಪುಷ್ಪ ಅಲಂಕಾರದೊಂದಿಗೆ ವಿಶೇಷ ದರ್ಶನ ಇರಲಿದೆ. ಅಂದು ಶ್ರೀದೇವಿಗೆ ಮಡ್ಲಕ್ಕಿ ಮತ್ತು ಪಡ್ಡಲಿಗೆ ತುಂಬಿಸಿಕೊಳ್ಳಲು ಏರ್ಪಡಿಸಿದೆ.

ಅಂದು ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ಪೂಜೆ ನಡೆಯಲಿದೆ. ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ, ಪ್ರಸಾದ ಸ್ವೀಕರಿಸಿ, ಶ್ರೀದೇವಿ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನದ ಮುಖ್ಯಾಧಿಕಾರಿ ಎಲ್.ತುಕಾರಾಮ ಚವ್ಹಾಣ್ ತಿಳಿಸಿದ್ದಾರೆ.

Advertisement
Tags :
bengaluruchitradurgafebruaryJatra MahotsavaSri Renukayalamma Devisuddionesuddione newsಚಿತ್ರದುರ್ಗಜಾತ್ರಾ ಮಹೋತ್ಸವಫೆಬ್ರವರಿಬೆಂಗಳೂರುಶ್ರೀ ರೇಣುಕಾಯಲ್ಲಮ್ಮ ದೇವಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article