Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರು ಹಲವು ಯೋಜನೆಗಳೇ ಕಾರಣ : ಕೆ.ಆರ್.ಮಂಜುನಾಥ್

05:03 PM Mar 09, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.09 : ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಮೆದೇಹಳ್ಳಿ ರಸ್ತೆಯಲ್ಲಿರುವ ಆದಿಶೇಷ ರೋಟರಿ ಭವನದಲ್ಲಿ ನವ ಜೀವನ ಸಮಿತಿ ಪೋಷಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

Advertisement

ಕಾರ್ಯಾಗಾರ ಉದ್ಗಾಟಿಸಿ ಮಾತನಾಡಿದ ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಕೆ.ಆರ್.ಮಂಜುನಾಥ್, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹಗಡೆರವರು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಕುಡಿತದ ಚಟದಿಂದ ಹೊರ ತಂದವರ ಮೇಲೆ ನಿಗಾ ಇಡಲು ಐದು ಜನರ ತಂಡ ರಚಿಸಿದ್ದು, ಪ್ರತಿ ಸೋಮವಾರ ಅವರ ಬಳಿ ಹೋಗಿ ಮದ್ಯಪಾನ ವ್ಯಸನದಿಂದ ಹೊರ ಬಂದಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲಿಸುವುದು ಕಾರ್ಯಾಗಾರದ ಉದ್ದೇಶ ಎಂದು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ಬಿ.ಗೀತ, ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ ವಿ.ಪಾಯಸ್ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ಕ್ಷೇತ್ರ ಯೋಜನಾಧಿಕಾರಿಗಳು ಮತ್ತು ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿ, ಜನಜಾಗೃತಿ ಮೇಲ್ವಿಚಾರಕರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
ನವ ಜೀವನ ಸಮಿತಿಯ 47 ಪೋಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Advertisement
Tags :
chitradurgaDr. D. Virendra Hegadefree societyK. R. Manjunathresponsible for many projectsSrikshetra Dharamsthalಕೆ.ಆರ್.ಮಂಜುನಾಥ್ಚಿತ್ರದುರ್ಗಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆವ್ಯಸನಮುಕ್ತ ಸಮಾಜ ನಿರ್ಮಾಣಶ್ರೀಕ್ಷೇತ್ರ ಧರ್ಮಸ್ಥಳ
Advertisement
Next Article