For the best experience, open
https://m.suddione.com
on your mobile browser.
Advertisement

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

11:24 AM May 09, 2024 IST | suddionenews
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ   21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ
Advertisement

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

Advertisement

ಲಿಂಗವಾರು ಒಟ್ಟಾರೆ ಫಲಿತಾಂಶ:

ಬಾಲಕರು:2,87,416(65.90%)
ಬಾಲಕಿಯರು'-3,43,788(81.11%)

Advertisement

ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :
1)ಉಡುಪಿ ಪ್ರಥಮ ಸ್ಥಾನ(94%)
2)ದಕ್ಷಿಣ ಕನ್ನಡ ,ದ್ವೀತಿಯ ಸ್ಥಾನ(92.12%)
3)ಶಿವಮೊಗ್ಗ (88.67%)

ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ:-
1)ಯಾದಗಿರಿ 50.59%

ಉಳಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 72.85%ರಷ್ಟು ಫಲಿತಾಂಶ ಬಂದಿದ್ದು ಈ ಮೂಲಕ 21ನೇ ಸ್ಥಾನದಲ್ಲಿ ಇದೆ. ಕಳೆದಉಳಿದಂತೆ ಧಾರವಾಡ 72.67%, ದಾವಣಗೆರೆ 72.49% ರಷ್ಟು ಫಲಿತಾಂಶವನ್ನು ಪಡೆದುಕೊಂಡು ನಂತರದ ಸ್ಥಾನದಲ್ಲಿವೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 22,275 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,  ಇದರಲ್ಲಿ 16,227 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇದರಿಂದ ರಾಜ್ಯದ ಫಲಿತಾಂಶದಲ್ಲಿ ಜಿಲ್ಲೆಗೆ 21ನೇ ಸ್ಥಾನಕ್ಕೆ ಕುಸಿದಿದೆ.

2023ರಲ್ಲಿ ಮೊದಲ ಸ್ಥಾನ : 2023ರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದ ಜಿಲ್ಲೆ, ಈ ಬಾರಿ 21ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷ ಫಲಿತಾಂಶಕ್ಕಿಂತ ಜಿಲ್ಲೆಗೆ ಈ ವರ್ಷದ ಫಲಿತಾಂಶದಲ್ಲಿ ಸಾಕಷ್ಟು ಹಿನ್ನಡೆಯಾಗಿದೆ ಎನ್ನಬಹುದು.

Tags :
Advertisement