Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ : 625 ಕ್ಕೆ 620 ಅಂಕ ಗಳಿಸಿದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ

06:26 PM May 09, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಮೇ. 09 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.  

Advertisement

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 151 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಇದರಲ್ಲಿ 80 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕ, 68 ವಿದ್ಯಾರ್ಥಿಗಳು ಶೇ.60 ಕ್ಕಿಂತ ಹೆಚ್ಚು ಅಂಕ ಹಾಗೂ 03 ವಿದ್ಯಾರ್ಥಿಗಳು ಶೇ.50ಕ್ಕಿಂತ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.

Advertisement

625 ಕ್ಕೆ 620 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಕೀರ್ತಿ ತಂದ ಅಭಯ್ ಸಿ ಐ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿರುತ್ತಾರೆ.

100ಕ್ಕೆ  100  ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ವಿವರ.
ಕನ್ನಡ   - (125/125) – 07
ಇಂಗ್ಲೀಷ್   - (100/100) – 03
ಹಿಂದಿ   - (100/100) – 16
ಗಣಿತ -  (100/100)  –  2
ವಿಜ್ಞಾನ - (100/100) – 1
ಸಮಾಜ ವಿಜ್ಞಾನ - (100/100) – 6

ಅತ್ಯುತ್ತಮ ಸಾಧನೆಗೈದ ಎಲ್ಲಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಶ್ಲಾಘಿಸಿ ತುಂಬು ಹೃದಯದಿಂದ ಅಭಿನಂದಿಸಿರುತ್ತಾರೆ.

Advertisement
Tags :
625 ಕ್ಕೆ 620 ಅಂಕchitradurgaSSLC resultsslc resultsstudentVidya vikas vidya samstheಎಸ್ಎಸ್ಎಲ್ಸಿ ಫಲಿತಾಂಶವಿದ್ಯಾ ವಿಕಾಸ ವಿದ್ಯಾ ಸಂಸ್ಥೆ
Advertisement
Next Article